ಹಾವೇರಿ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaon) ತಾಲ್ಲೂಕಿನ ತಡಸ ತಿಮ್ಮಾಪುರ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ (59), ಚಂದ್ರಮ್ಮನ ಪುತ್ರಿ ಹರಿಹರದ ಮೀನಾ (38), ಹರಿಹರದ ಮಹೇಶ್ ಕುಮಾರ್ ಸಿ (41), ಹಾಗೂ ಹರಿಹರದ ಧನವೀರ್ (11) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚುನಾವಣಾ ಹೊತ್ತಲ್ಲಿ ತನಿಖಾ ಸಂಸ್ಥೆಗಳು ಸಿಎಂ ಅತಿಶಿಯನ್ನು ಬಂಧಿಸಬಹುದು: ಕೇಜ್ರಿವಾಲ್ ಆರೋಪ
Advertisement
Advertisement
ತಿಮ್ಮಾಪುರದ ಬಳಿ ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಳಿ ಬಣ್ಣದ ಮಹಿಂದ್ರಾ XUV 700 ಕಾರು ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಟಾಟಾ ಆಲ್ಟ್ರೋಜ್ ಕಾರಿಗೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮೃತಪಟ್ಟಿದ್ದಾರೆ. ಎಸ್‌ಪಿ ಅಂಶುಕುಮಾರ ಹಾಗೂ ತಡಸ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ: ಮುನಿರತ್ನಗೆ ಡಿಕೆಸು ತಿರುಗೇಟು
Advertisement