ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ (Hosakote) ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ. ರೂಮ್‌ನಲ್ಲಿ ನಾಲ್ವರು ಸಹ ಮಲಗಿದ್ದಂತೆಯೇ ಮೃತಪಟ್ಟಿದ್ದಾರೆ.
ಮುತ್ಸಂದ್ರ ಗ್ರಾಮದ ಛೋಟಾಸಾಬ್ ಎನ್ನುವವರಿಗೆ ಸೇರಿದ ಲೇಬರ್ ಶೆಡ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಅಸ್ಸಾಂ ರಾಜ್ಯದ ಮೂಲದವರು. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ – ಅಶೋಕ್ ನಗರ ಪೊಲೀಸರಿಂದ ಯುಡಿಆರ್ ದಾಖಲು
ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

