ರಾಮನಗರ: ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ನೇರಳೂರು ಗ್ರಾಮದಲ್ಲಿ ನಾಲ್ಕು ಚಿರತೆ (Leopard) ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ರೈತ ನಾಗೇಶ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು ನಾಲ್ಕೈದು ದಿನಗಳ ಪ್ರಾಯದ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿವೆ. ವಿಷಯ ತಿಳಿದ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ
ಸದ್ಯ ಮರಿಗಳ ಸುರಕ್ಷತೆ ಹಾಗೂ ತಾಯಿ ಚಿರತೆಯ ಚಲನವಲನದ ಬಗ್ಗೆ ಅರಣ್ಯ ಇಲಾಖೆ ನಿಗಾ ವಹಿಸಿದ್ದು, ಚಿರತೆಯನ್ನು ಸೆರೆಹಿಡಿಯಲು ಬೋನ್ ಅಳವಡಿಸಲು ಇಲಾಖೆ ಮುಂದಾಗಿದೆ.
ಇನ್ನೂ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡುಬಂದ ಹಿನ್ನೆಲೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.ಇದನ್ನೂ ಓದಿ: ದಕ್ಷಿಣ ಕಾಶಿ ನಂಜನಗೂಡು ದೇವಾಲಯದ ಲೆಕ್ಕಪತ್ರದಲ್ಲಿ 4-5 ಕೋಟಿ ಅಕ್ರಮದ ಶಂಕೆ?
