ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ (Accident) ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ (National Highway-13) ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು
ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು (Chitradurga Rural Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: KSOU ಕರ್ಮಕಾಂಡ: 500 ಸಿಬ್ಬಂದಿ ಜಾಗಕ್ಕೆ 1,300 ಸಿಬ್ಬಂದಿ ನೇಮಕ; ಆದಾಯ 86 ಕೋಟಿ, ಖರ್ಚು 263 ಕೋಟಿ
Web Stories