ಗದಗ: ಇಲ್ಲಿನ ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ (Murder) ಘಟನೆ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ.
ಗದಗ (Gadag) ಜಿಲ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55) ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾಗಿದ್ದಾರೆ. ಕೊಲೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು (Gadag Police) ಹುಡುಕಾಟ ನಡೆಸಿದ್ದಾರೆ.
ಮೃತ ನಾಲ್ವರ ಪೈಕಿ ಮೂವರು ದಾಸರ ಓಣಿಯಲ್ಲಿ ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಸಹ ನಡೆದಿತ್ತು. ವಿವಾಹ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಆಗಮಿಸಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಲೋಕಸಭೆಗೆ ಶುಕ್ರವಾರ ಮೊದಲ ಹಂತದ ಮತದಾನ – 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಎಲೆಕ್ಷನ್
ಸದ್ಯ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಚಿವ ಹೆಚ್.ಕೆ ಪಾಟೀಲ್ ಸಹ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ:
ಇನ್ನು ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಇದನ್ನೂ ಓದಿ: Lok Sabha Polls: ಇಂದು ಮೊದಲ ಹಂತದ ಮತದಾನ- ಬೆಂಗಳೂರಿನಿಂದ ತಮಿಳುನಾಡಿನತ್ತ ಮತದಾರರು
ಪ್ರಕರಣ ಕುರಿತು ಮಾಹಿತಿ ನೀಡಿರುವ ಬಿ.ಎಸ್ ನೇಮಗೌಡ ಅವರು, ಮಧ್ಯರಾತ್ರಿ ನಾಲ್ವರ ಕೊಲೆಯಾಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದೆ. ಮಾರಕಾಸ್ತ್ರಗಳಿಂದ ಹತ್ಯೆಯಾಗಿದೆ. ಮೊದಲಿಗೆ ಹಂತಕರು ಬಾಗಿಲು ಬಡಿದಿದ್ದಾರೆ, ಯಾರೊಬ್ಬರೂ ಬಾಗಿಲು ತೆರೆಯದ ಕಾರಣ ಅವರು, ಮಹಡಿಯಿಂದ ಬಂದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಹಂತಕರು ಯಾರು ಅನ್ನೋದು ತಿಳಿದುಬಂದಿಲ್ಲ. ಆದಷ್ಟು ಬೇಗ ಅವರನ್ನ ಪತ್ತೆಹಚ್ಚಿ, ಬಂಧಿಸುತ್ತೇವೆ ಎಂದಿದ್ದಾರೆ.