ಕೋಲಾರ: ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಉತ್ತಮ ಮಳೆಯಾಗುವ ಮೂಲಕ ಬಿಟ್ಟು ಬಿಡದೆ ಇಲ್ಲಿನ ರೈತರು, ಜನರನ್ನು ಮಳೆರಾಯ ಕಾಡುತ್ತಿದ್ದಾನೆ. ಅದರಲ್ಲೂ ನವೆಂಬರ್‍ನಲ್ಲಿ ಬೀಳುತ್ತಿರುವ ಅಕಾಲಿಕ ಮಳೆಗೆ ಜನ ರೋಸಿ ಹೋಗಿದ್ದು, ಮುಂದಿನ 5 ದಿನಗಳ ಕಾಲ ಜೋರು ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Advertisement
ದೀಪಾವಳಿ ಬಳಿಕ ದೀಪ ಇಟ್ಟುಕೊಂಡು ಕಾದರೂ ಮಳೆ ಬರಲ್ಲ ಅನ್ನೋದು ಹಿಂದಿನ ನಾಣ್ಣುಡಿ. ಆದರೆ ಈ ಬಾರಿ ದೀಪಾವಳಿ ಬಳಿಕವೂ ಮಳೆ ಜಿಲ್ಲೆಯ ಜನರನ್ನು ಮಾತ್ರವಲ್ಲ, ರಾಜ್ಯದ ಜನರನ್ನು ಕಾಡುತ್ತಿದೆ. ಅದರಲ್ಲೂ ಕೋಲಾರ ಜಿಲ್ಲೆಯಲ್ಲಿ ಇನ್ನೂ ಐದು ದಿನ ಉತ್ತಮ ಮಳೆಯಾಗುವ ಮೂನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ – ರೆಡ್ ಅಲರ್ಟ್ ಫೋಷಣೆ
Advertisement
ಪರಿಣಾಮ 24 ಗಂಟೆಗಳ ಕಾಲ ಕಂಟ್ರೋಲ್ ರೂಂ ತೆರೆಯುವಂತೆ ಕೋಲಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ತಹಶೀಲ್ದಾರ್, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನ ಜಾನುವಾರು ಸೇರಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಯಾಗದಂತೆ ಎಚ್ಚರವಹಿಸುವಂತೆ ಸೂಚಿಸಲಾಗಿದೆ.
Advertisement
Advertisement
ಇನ್ನೂ ಈಗಾಗಲೇ ರಾಗಿ ಬೆಳೆ ಮಣ್ಣು ಪಾಲಾಗಿದೆ. ರೈತರು ತಾವು ಬೆಳೆದ ಬೆಳೆಗಳೆಲ್ಲ, ಮಳೆಯಿಂದ ಹಾಳಾಗಿದೆ. ಇದರಿಂದ ಜನ ಸಾಮಾನ್ಯರು ಮಾತ್ರವಲ್ಲದೆ ರೈತರು ಹೈರಾಣಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಸುಮಾರು 900 ಎಕರೆಯಷ್ಟು ವಿವಿಧ ಬೆಳೆಗಳು ನಾಶವಾಗಿರುವ ಕುರಿತು ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದ ಮೂರು ಮನೆಗಳಿಗೆ ಹಾನಿಯಾಗಿರುವ ಕುರಿತು ಅಂದಾಜಿಸಲಾಗಿದೆ. ಮಳೆ ಬಿಟ್ಟರೆ ಸಾಕು ಎನ್ನುವಂತೆ ವರುಣನ ಆರ್ಭಟ ಮುಂದುವರೆದಿದೆ. ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರು, ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಮುಂದಿನ 5 ದಿನಗಳ ಕಾಲ ಮಳೆ ಸೂಚನೆ ನೀಡಿರುವುದು ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಉಗ್ರಗಾಮಿ ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿ
ಒಟ್ಟಿನಲ್ಲಿ ನೀರು ಎನ್ನುತ್ತಿದ್ದ ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಿಂದ ಜಿಲ್ಲೆಯ ಬಹುತೇಕ ಕೆರೆಗಳು ತುಂಬಿ ಕೋಡಿ ಹರಿದಿವೆ. ಆದರೆ ನಿರಂತರ ಮಳೆಯಿಂದ ರೈತರು, ಜನ ಸಾಮಾನ್ಯರು ಹೈರಾಣಾಗಿದ್ದು, ಮತ್ತೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿರುವುದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.