ಬೆಂಗಳೂರು: ಅಸ್ಸಾಂ ಮೂಲದ ವ್ಯಕ್ತಿಯ ಕಾರಿಗೆ ಡಿಕ್ಕಿ ಹೊಡೆದು ಗಲಾಟೆ ಮಾಡಿ ಚಿನ್ನದ ಚೈನ್ ಎಗರಿಸಿಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸರು (Varthur Police) ನಾಲ್ವರು ಕುಖ್ಯಾತ ಸುಲಿಗೆಕೋರರನ್ನು ಬಂಧಿಸಿದ್ದಾರೆ.
ಅರ್ಬಾಜ್ ಖಾನ್, ಮೆಹಬೂಬ್, ಶೇಖ್ ಪಾರಿಜಾನ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರ್ಬಾಜ್ ಖಾನ್ ಹೆಬ್ಬಾಳದ ಕೆಂಪಾಪುರ ನಿವಾಸಿಯಾಗಿದ್ದು, ಈತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. ಆರ್.ಟಿ. ನಗರ, ಕುಂಬಳಗೋಡು, ಸುಬ್ರಹ್ಮಣ್ಯಪುರ ಹಾಗೂ ವರ್ತೂರು ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಸುಲಿಗೆ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಎಂ-ಸ್ಯಾಂಡ್, ಜಲ್ಲಿ ಸಾಗಾಟಕ್ಕೆ ನಿರ್ಬಂಧ – ತಮಿಳುನಾಡು ಸರ್ಕಾರದ ವಿರುದ್ಧ ಲಾರಿ ಮಾಲೀಕರ ಆಕ್ರೋಶ
ಅಸ್ಸಾಂ ಮೂಲದ ವ್ಯಕ್ತಿಯೊಬ್ಬರ ಕಾರಿಗೆ ಡಿಕ್ಕಿ ಹೊಡೆದು ಗಲಾಟೆ ಸೃಷ್ಟಿಸಿದ್ದ ಗ್ಯಾಂಗ್, ಬಳಿಕ ಅವರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವರ್ತೂರು ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪೌರತ್ವ ಪಡೆಯೋ ಮುನ್ನವೇ 1980ರ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರು? – ದಾಖಲೆಗಾಗಿ ಪೊಲೀಸರಿಂದ ಶೋಧ
