ಅನೈತಿಕ ಸಂಬಂಧ ಶಂಕೆ – ಕತ್ತಿಯಿಂದ ಹೊಡೆದು ನಾಲ್ವರ ಭೀಕರ ಹತ್ಯೆ

Public TV
1 Min Read
Crime

ಮಡಿಕೇರಿ: ಕತ್ತಿಯಿಂದ ಹೊಡೆದು ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆಯ (Ponnampet) ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದವರನ್ನು ಕರಿಯ (75) ಗೌರಿ (70) ನಾಗಿ (35) ಹಾಗೂ ಕಾವೇರಿ (7) ಎಂದು ಗುರುತಿಸಲಾಗಿದೆ. ಗಿರೀಶ್ (35) ಹತ್ಯೆಗೈದ ಆರೋಪಿಯಾಗಿದ್ದಾನೆ. ಆತ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!

ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿದ ಹಣದ ವಿಚಾರಕ್ಕಾಗಿ ನಾಲ್ವರ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು, ಇದೇ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನಿಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಗಂಡನ ಹಿಂಸೆ ತಾಳಲಾರದೆ ತವರು ಸೇರಿದ್ದ ಪತ್ನಿ

Share This Article