– ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಜೀವ ಬಲಿ
ಬೆಂಗಳೂರು: ನೇಹಾ ಹೀರೇಮಠ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು ಕಗ್ಗೊಲೆ ನಡೆದಿದೆ. ಅಲ್ಲದೇ ಬುಧವಾರ (ಇಂದು) ಒಂದೇ ದಿನ ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧೆಡೆ ಹತ್ಯೆ ಹಾಗೂ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.
ಬೆಂಗಳೂರಿನ ಕೆಂಗೇರಿಯಲ್ಲಿ (Bengaluru Kengeri) ಚಿನ್ನದಾಸೆ, ಸಾಲ ತೀರಸಲು ಹಾಗೂ ತನ್ನ ಪ್ರಿಯಕರನಿಗೆ ಹಣ ಕೊಡಬೇಕೆಂಬ ಕಾರಣಕ್ಕೆ ಯುವತಿಯೊಬ್ಬಳು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದಾಳೆ. 24 ವರ್ಷ ಮೋನಿಕಾ ಹೆರಸಿನ ಯುವತಿ ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ಬಾಡಿಗೆ ಪಡೆದುಕೊಂಡಿದ್ದ ಮನೆಯ ಮಾಲಕಿಯನ್ನೇ ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮೂರು ತಿಂಗಳ ಹಿಂದಯಷ್ಟೇ ಗುರುಮೂರ್ತಿ ಎಂಬುವವರ ಮನೆಯಲ್ಲಿ ಬಾಡಿಗೆಗೆ ಬಂದಿದ್ದಳು. ತನ್ನ ಪ್ರಿಯಕರನನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಮಾಡಿಕೊಂಡಿದ್ದಳು. ಸದ್ಯ ಮಾಲಕಿಯನ್ನು ಹತ್ಯೆಗೈದ ಮೋನಿಕಾ ಕೆಂಗೇರಿ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್: ಜಾರ್ಖಂಡ್‌ನ ಕಾಂಗ್ರೆಸ್ ಸಚಿವ ಅಲಂಗೀರ್ ಆಲಂ ಬಂಧನ!
ಮತ್ತೊಂದು ಪ್ರಕರಣದಲ್ಲಿ ಎಲೆಕ್ಟಾçನಿಕ್ ಸಿಟಿಯ ಖಾಸಗಿ ಕಾಲೇಜಿನ (Private College) 5ನೇ ಮಹಡಿಯಿಂದ ಬಿದ್ದು ಆಂಧ್ರ ಮೂಲದ ವಿದ್ಯಾರ್ಥಿ ಕರಸಾಲ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳವಾರ ಕಂಪ್ಯೂಟರ್ ಸೈನ್ಸ್ 5ನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ತಡವಾಗಿ ಬಂದಿದ್ದಕ್ಕೆ ತನ್ನನ್ನು ನಿಂದಿಸಿದ್ದಾರೆ ಅಂತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಅತ್ತ, ವಿಜಯಪುರದಲ್ಲಿ 4 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿದೆ. ಮನೋಜ್‌ಕುಮಾರ ಪೋಳ – ರಾಖಿ ನೇಣಿಗೆ ಶರಣಾದ ದಂಪತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ