ತಿರುವನಂತಪುರ: ಹಳಿಯಲ್ಲಿದ್ದ ಕಸ ತೆರವುಗೊಳಿಸುತ್ತಿದ್ದ ವೇಳೆ ಎಕ್ಸ್‌ಪ್ರೆಸ್ ರೈಲು (Express Train) ಡಿಕ್ಕಿ ಹೊಡೆದು ರೈಲ್ವೆ ಇಲಾಖೆಯ ನಾಲ್ವರು ಗುತ್ತಿಗೆ ಕಾರ್ಮಿಕರು (Contract Workers) ಸ್ಥಳದಲ್ಲೇ ಮೃತಪಟ್ಟ ಘಟನೆ ಕೇರಳದ (Kerala) ಪಾಲಕ್ಕಾಡ್ (Palakkad) ಜಿಲ್ಲೆಯ ಶೋರ್ನೂರ್ ಬಳಿ ನಡೆದಿದೆ.
ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್ ರೈಲು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೈಲು ಬರುತ್ತಿರುವುದನ್ನು ಗಮನಿಸದೇ ಅಪಘಾತ ಸಂಭವಿಸಿರಬಹುದು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 10,000 ಹೆಕ್ಟೇರ್ ಬೆಳೆ ಹಾನಿ – ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ, ರೈತರ ಕಣ್ಣಲ್ಲಿ ನೀರು
Advertisement
Advertisement
ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೊಂದು ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಹಳಿ ಸಮೀಪದ ಭಾರತಪುಳ ನದಿಗೆ ಮೃತದೇಹ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ
Advertisement