ರಾಮನಗರ: ಕನಕಪುರ (Kanakapura) ತಾಲೂಕಿನ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ಮೃತ ವ್ಯಕ್ತಿ ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಪರೀಕ್ಷೆ ಹಾಗೂ ಎಫ್‌ಎಸ್‌ಎಲ್ (FSL) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ ಎಂದು ರಾಮನಗರ (Ramanagara) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಾರ್ತಿಕ್ ರೆಡ್ಡಿ (Karthik Reddy) ಮಾಹಿತಿ ನೀಡಿದ್ದಾರೆ.
ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕನಕಪುರ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಅವರಿಂದ ಎಫ್‌ಎಸ್‌ಎಲ್ ವರದಿಯನ್ನು ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ. ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ. ಇಡೀ ಪ್ರಕರಣ ಕುರಿತು ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು (FIR) ದಾಖಲಾಗಿವೆ ಎಂದರು. ಇದನ್ನೂ ಓದಿ: ಜನಾರ್ದನ ರೆಡ್ಡಿ ಸಮ್ಮುಖದಲ್ಲೇ ಅಭ್ಯರ್ಥಿಗೆ 1 ಲಕ್ಷ ಹಣ ನೀಡಿದ ಸ್ವಾಮೀಜಿ
Advertisement
Advertisement
ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ದೂರು ನೀಡಿದ್ದರು. ಬಳಿಕ ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್ ಚಾಲಕ ಪ್ರತಿ ದೂರು ನೀಡಿದ್ದು, ಮರು ದಿನ ಬೆಳಗ್ಗೆ 8 ಗಂಟೆಯ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್ ದೂರದಲ್ಲಿ ಇದ್ರೀಷ್ ಪಾಷಾ ಅವರ ಶವ ಪತ್ತೆ ಆಗಿದೆ. ಈ ಕುರಿತು ಅವರ ಸಹೋದರ ಯೂನುಸ್ ಪಾಷಾ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 70 ಸೀಟ್ ಬಂದ್ರೆ ಲಿಂಗಾಯತರು ಸಿಎಂ ಆಗ್ತಾರೆ: ಶಾಮನೂರು ಸ್ಫೋಟಕ ಹೇಳಿಕೆ