ಬೆಂಗಳೂರು: ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಹೋಟೆಲ್ ಮುಂಭಾಗದ ಬಳಿ ನಡೆದಿದೆ.
ವಿಜಯಪುರ ಮೂಲದ ಗೋವಿಂದಗೌಡ ಅವರು ವೈಯಕ್ತಿಕ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಶನಿವಾರ ರಾತ್ರಿ ಗಾಂಧಿನಗರ ಹೋಟೆಲ್ ಬಳಿ ಕಾರು ನಿಲ್ಲಿಸಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದಿದ್ದ ಮೂವರು, ಕಾರಿಗೆ ಜಾಕ್ ಹಾಕಿ ನಾಲ್ಕು ಚಕ್ರಗಳನ್ನ ಬಿಚ್ಚಿ, ಚಕ್ರಗಳಿಗೆ ಸಿಮೆಂಟ್ ಕಲ್ಲುಗಳನ್ನು ಇಟ್ಟು ಪರಾರಿಯಾಗಿದ್ದಾರೆ.ಇದನ್ನೂ ಓದಿ: ಜಿಯೋ ಗ್ರಾಹಕರಿಗೆ ಮಾತ್ರ ಐಪಿಎಲ್ ವೀಕ್ಷಣೆ ಉಚಿತ! – ಎಷ್ಟು ರಿಚಾರ್ಜ್ ಮಾಡಿದ್ರೆ ಫ್ರೀ?
ಹೋಟೆಲ್‌ನಲ್ಲಿದ್ದ ಯಾತ್ರಿಕರು ಕಳ್ಳತನದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದು, ಕಳ್ಳರ ಕಳ್ಳತನ ಮಾಡುತ್ತಿರುವ ವಿಡಿಯೋ ಸೆರೆಯಾಗಿದೆ. ಸದ್ಯ ಕಾರು ಮಾಲೀಕ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಚಕ್ರಗಳನ್ನು ಕದ್ದ ಕಳ್ಳರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಈ ಕುರಿತು ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯಿಸಿದ ಅವರು, ನಾನು ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿದ್ದು, ಕೆಲಸ ಮುಗಿಸಿ ಇಲ್ಲಿಗೆ ಬರುವಾಗ ನನ್ನ ಸ್ನೇಹಿತ ಕಾರು ನಿಮ್ಮ ಬಳಿ ಇರಲಿ ಎಂದು ಬಿಟ್ಟು ಹೋಗಿದ್ದರು. ಆದರೆ ಭಾನುವಾರ ಬೆಳಿಗ್ಗೆ ನೋಡಿದಾಗ ಕಾರಿನ ನಾಲ್ಕು ಚಕ್ರ ಇರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ನಾನು ತಂಗಿದ್ದ ಹೋಟೆಲ್‌ನಲ್ಲಿಯೇ ಇದ್ದ ತಮಿಳುನಾಡು ಮೂಲದ ಓರ್ವ, ಟೈಯರ್ ಕದಿಯುತ್ತಿರುವ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಪೊಲೀಸರು ಬಂದಾಗ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ‘ಡೆವಿಲ್’ ಸಿನಿಮಾದಲ್ಲಿನ ಪಾತ್ರದ ಬಗ್ಗೆ ಅಪ್‌ಡೇಟ್ ಕೊಟ್ಟ ಶರ್ಮಿಳಾ ಮಾಂಡ್ರೆ