ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಕಾಡಾನೆಯೊಂದಿಗೆ ಸೆಲ್ಫಿ – 20 ಸಾವಿರ ರೂ. ದಂಡ
ಪ್ರಕರಣದ ಬೆನ್ನತ್ತಿದ್ದ ಪೊಲೀಸರು (Police) ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಒಂದು ವೇಳೆ ದಂಡದ ಹಣ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದೆ. ಇದನ್ನೂ ಓದಿ: ಮಕ್ಕಳಾಗದ್ದಕ್ಕೆ ಕತ್ತು ಕುಯ್ದುಕೊಂಡು ಮಹಿಳೆ ಆತ್ಮಹತ್ಯೆ
Web Stories