ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ಗುಂಡ್ಲುಪೇಟೆ (Gundlupet) ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟಮ್ಮ ಮತ್ತು ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಮೃತಪಟ್ಟ ಬಾಲಕಿ. ಮನೆಯಲ್ಲಿ ತಾಯಿ ಗ್ರೈಂಡರ್ ಬಳಸುತ್ತಿದ್ದ ವೇಳೆ ಬಾಲಕಿ ಅದನ್ನು ಮುಟ್ಟಿದ್ದಾಳೆ. ಈ ವೇಳೆ ಗ್ರೈಂಡರ್‌ಗೆ ವಿದ್ಯುತ್ ಪ್ರವಹಿಸಿದ್ದು, ಬಾಲಕಿಗೆ ತೀವ್ರ ಶಾಕ್ ಹೊಡೆದಿದೆ. ಇದನ್ನೂ ಓದಿ: KRS ಖಾಲಿ ಖಾಲಿ – ಇನ್ನಿರೋದು ಕೇವಲ 11 ಟಿಎಂಸಿ ನೀರು
ಅಸ್ವಸ್ಥಗೊಂಡ ಬಾಲಕಿಯನ್ನು ಪೋಷಕರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ತಂದೆ-ತಾಯಿಯ ಕಣ್ಮುಂದೆಯೇ ಮಗಳು ವಿದ್ಯುತ್ ಶಾಕ್‌ಗೆ ಬಲಿಯಾಗಿರುವುದರಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ದಾವಣಗೆರೆ| ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು
