ರಾಮನಗರ: ಲಾರಿಗೆ ಸಿಲುಕಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಬಿಡದಿ ಬಳಿಯ ಉರಗಹಳ್ಳಿ ಬಳಿ ನಡೆದಿದೆ.
ಹುಚ್ಚಮ್ಮನದೊಡ್ಡಿ ಕಗ್ಗಲಯ್ಯ ಹಾಗೂ ಲತಾ ದಂಪತಿಯ ಪುತ್ರಿ ವರ್ಷಿತಾ (4) ಮೃತ ದುರ್ದೈವಿ. ಕೆಲಸದ ನಿಮಿತ್ತ ಉರುಗಳ್ಳಿ ಗ್ರಾಮಕ್ಕೆ ಮಗಳನ್ನು ಕರೆದುಕೊಂಡು ದಂಪತಿ ಬಂದಿದ್ದರು. ಈ ವೇಳೆ ರಸ್ತೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಲಾರಿ ಡಿಕ್ಕಿ ಹೊಡೆದಿದೆ.
ಅಷ್ಟೇ ಅಲ್ಲದೇ ಕೆಳಗೆ ಬಿದ್ದ ಬಾಲಕಿ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲಿಯೇ ಬಾಲಕಿ ಮೃತ ಪಟ್ಟಿದ್ದಾಳೆ. ಲಾರಿಗಳ ಹಾವಳಿ ಜೋರಾಗಿದ್ದು, ಘಟನಾ ಸ್ಥಳಕ್ಕೆ ಕ್ರಸರ್ ನ ಮಾಲೀಕರು ಯಾರೂ ಕೂಡಾ ಭೇಟಿ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv