ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ಲಾಕ್ ಕೆಳಗೆ ಬಿದ್ದು, 4 ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಘಟನೆ ನಡೆದಿದ್ದು, ಮನಸ್ವಿ ಎಂಬ ಮಗು ಮೃತಪಟ್ಟಿದೆ. ಸುಬ್ಬಾರಾವ್ ಎಂಬವರಿಗೆ ಸೇರಿದ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಕಟ್ಟಡದ ನಾಲ್ಕನೇ ಮಹಡಿಯಿಂದ ಆಕಸ್ಮಿಕವಾಗಿ ಸಿಮೆಂಟ್ ಇಟ್ಟಿಗೆಗಳು ಕೆಳಗೆ ಬಿದ್ದಿವೆ. ಈ ಇಟ್ಟಿಗೆಗಳು ಕಟ್ಟಡದ ಪಕ್ಕದಲ್ಲೇ ಇದ್ದ ಶೀಟ್ ಮನೆಯ ಮೇಲೆ ಅಪ್ಪಳಿಸಿದ್ದು, ಮನೆಯ ಒಳಗಿದ್ದ ಮನಸ್ವಿ ಎಂಬ ನಾಲ್ಕು ವರ್ಷದ ಮಗು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದೆ. ಸುಮಾರು ಐದಾರು ಸಿಮೆಂಟ್ ಇಟ್ಟಿಗೆಗಳು ಬಿದ್ದಿದ್ದವು ಎಂದು ತಿಳಿದುಬಂದಿದೆ. ಇದನ್ನೂ ಓದಿ: KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್ ಅಪಘಾತದಲ್ಲಿ ಸಾವು
ಈ ದುರ್ಘಟನೆಗೆ ಸಂಬಂಧಿಸಿದಂತೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಟ್ಟಡ ನಿರ್ಮಾಣದಲ್ಲಿ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದಿರುವುದು ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

