ಬೆಂಗಳೂರು: ನಂದಿಬೆಟ್ಟಕ್ಕೆ (Nandi Hills) ಬಂದು ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬಂದಿದ್ದ ನಾಲ್ವರು ಸ್ನೇಹಿತರು, ಬಿಸಿಲ ಬೇಗೆಗೆ ಕಂಗೆಟ್ಟು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದ ಕೆರೆಗೆ ಈಜಲು (Swimming) ತೆರಳಿದ್ದರು. ಆದ್ರೆ ಶೇಖ್ ಥೈರ್ (18), ತೋಹಿದ್, ಶಾಹಿದ್, ಮತ್ತು ಫೈಜಲ್ ಖಾನ್ ನಾಲ್ವರು ಸ್ನೇಹಿತರೂ ನೀರುಪಾಲಾಗಿದ್ದಾರೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್
ಕೆರೆ ದಡದಲ್ಲಿ ಬಟ್ಟೆಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹ ಪತ್ತೆಗೆ ಶೋಧ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋತಿ ಚೂರು ಲಾಡು ತಿನ್ನಲು ಮುಗಿಬಿದ್ದ ʻಕೈʼ ಕಾರ್ಯಕರ್ತರು