ಒಟ್ಟಾವಾ: ಕೆನಡಾ ದೇಶದ ಜೂನಿಯಾರ್ ಹಾಕಿ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಗಿ 14 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಕೆನಡಾದ ಸಾಸ್ಕಾಚೆವನ್ ಗ್ರಾಮೀಣ ಪ್ರದೇಶದ ಹೆದ್ದಾರಿ ತಿಸ್ದಲೆ ಬಳಿ ಆಟಗಾರರಿದ್ದ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದು, ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.
ಸಾಸ್ಕಾಚೆವನ್ ಜೂನಿಯರ್ ಹಾಕಿ ಟೂರ್ನಿಮೆಂಟ್ ನಲ್ಲಿ ಭಾಗವಹಿಸುವ ಸಲುವಾಗಿ ಆಟಗಾರರು ಬಸ್ ನಲ್ಲಿ ಹೊರಟ್ಟಿದ್ದರು. ಒಟ್ಟಾರೆ 28 ಮಂದಿ ಆಟಗಾರರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಎಲ್ಲರೂ 16 ರಿಂದ 24 ವಯಸ್ಸಿನ ಒಳಗಿನವರು ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ತಿಳಿಸಿದ್ದಾರೆ.