ರಿಷಬ್ ಶೆಟ್ಟಿ ಫಿಲಂಸ್ ನಿರ್ಮಾಣದಲ್ಲಿ ಮೂಡಿ ಬಂದ, ರಿಷಬ್ ಶೆಟ್ಟಿ ನಿರ್ಮಾಪಕರಾಗಿರುವ ಶಿವಮ್ಮ ಸಿನಿಮಾಗೆ ಸಾಕಷ್ಟು ಪ್ರಶಸ್ತಿಗಳು ಬಂದಿವೆ. ಈಗ ಫ್ರಾನ್ಸ್ ನ ನಾಂಟೆಸ್ ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್ಸ್ ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿದೆ. ಜೈಶಂಕರ್ ಅರ್ಯರ ನಿರ್ದೇಶನದ ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚನ್ನೆಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.
ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ೪೬ ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ಆದಷ್ಟು ನೈಜವಾಗಿಯೇ ಇಡೀ ಸಿನಿಮಾವನ್ನು ಕಟ್ಟಿರುವುದು ಮತ್ತೊಂದು ವಿಶೇಷ.
ಈ ಚಿತ್ರ ಕೊಪ್ಪಳ ಜಿಲ್ಲೆಯ ಕುಕ್ನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಣ ವಾಗಿದ್ದು, ಸಂಪೂರ್ಣ ನಟರೆಲ್ಲ ಅದೇ ಊರಿನವರಾಗಿದ್ದು ಎಲ್ಲರೂ ಮೊದಲ ಬಾರಿ ನಟಿಸಿದ್ದಾರೆ. NFDC ಆಯೋಜಿತ ಫಿಲಂ ಬಜಾರ್ ನ ವರ್ಕ್ ಇನ್ ಪ್ರೋಗ್ರೆಸ್ ನಲ್ಲಿ ಜಯಿಸಿ, ಬೂಸಾನ್ ಚಿತ್ರೋತ್ಸವದಲ್ಲಿ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡು, ಈಗ ಫ್ರಾನ್ಸ್ ನ ನಾಂಟೆಸ್ ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್ಸ್ ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿದೆ. ಈಗಾಗಲೇ ಹಲವಾರು ಚಿತ್ರೋತ್ಸವ ವದಲ್ಲಿ ಆಯ್ಕೆ ಆಗಿದ್ದು ಮತ್ತಷ್ಟು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುವ ನಿರೀಕ್ಷೆ ಇದೆ.