ಬೆಳಗಾವಿ: ಎಸ್‌ಪಿ (SP) ಹೆಸರಿನಲ್ಲಿ ನಕಲಿ ಫೇಸ್‌ಬುಕ್ (Facebook Account) ಖಾತೆಯನ್ನು ರಚಿಸಿ ಜನರಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ. ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜಸ್ಥಾನ (Rajasthan) ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: MUDA Scam; ಇ.ಡಿ ವಿಚಾರಣೆ ಬೆನ್ನಲ್ಲೇ ಪಾಲಿಕೆ ನೌಕರ ವಜಾ
Advertisement
Advertisement
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ಜನರನ್ನು ವಂಚಿಸುತ್ತಿದ್ದ. ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ (Gadag) ಮತ್ತು ಮಂಡ್ಯ (Mandya) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆಯನ್ನು ವಂಚಿಸಿದ್ದ.
Advertisement
ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಎಸ್ಪಿ ಎಫ್‌ಐಆರ್ ದಾಖಲಿಸಿದ್ದಾರೆ. ದಾಖಲಿಸಿದ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Advertisement
ಈ ಕುರಿತು ಎಸ್ಪಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಯಾವ ಪೊಲೀಸ್ ಅಧಿಕಾರಿಗಳೂ ಹಣ ಕೇಳುವುದಿಲ್ಲ. ಜಾಲತಾಣ ನಂಬಿ, ಯಾರೂ ಹಣ ಕೊಡಬಾರದು. ಇಂತಹ ಸಂಗತಿಗಳಿಂದ ಎಚ್ಚರದಿಂದ ಇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ – ಮಕ್ಕಳಿಗೆ ಶಾಲೆಯಿಂದ ವಿನಾಯಿತಿ