ಚಿಕ್ಕಬಳ್ಳಾಪುರ: ರೈತರು (Farmers) ಹಗಲು ರಾತ್ರಿ ಕಷ್ಟ ಪಟ್ಟು ಹೈನೋದ್ಯಮದ ಮೂಲಕ ಹಾಲಿನ ಡೈರಿಗಳಿಗೆ ಪರಿಶುದ್ಧ ಹಾಲು ಸರಬರಾಜು ಮಾಡ್ತಿದ್ದಾರೆ. ಆದರಿಲ್ಲಿ ಸ್ವತಃ ಡೈರಿ ಸಿಬ್ಬಂದಿಯೇ (Milk Dairy Worker) ಶುದ್ಧ ಹಾಲಿಗೆ ನೀರು ಬೆರಸಿ ವಂಚನೆ ಮಾಡಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.
Advertisement
ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿಎಂಸಿ ಕೇಂದ್ರದಲ್ಲಿ (Milk Dairy BMC Center) ಈ ಘಟನೆ ಬೆಳಕಿಗೆ ಬಂದಿದೆ. ಅಂದಹಾಗೆ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಲಿನ ಡಂಪ್ ಟ್ಯಾಂಕ್‌ಗೆ ನೀರು ಕಲಬೆರಕೆ ಮಾಡಿ, ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ ಡೈರಿಗೆ ಸರಬರಾಜು ಮಾಡಿ ಈಗ ಸಿಕ್ಕಿ ಬಿದ್ದಿದ್ದಾರೆ. ಸ್ವತಃ ಡೈರಿ ಸಿಬ್ಬಂದಿ ಕಳ್ಳಾಟವನ್ನ ಮತ್ತೊರ್ವ ಸಿಬ್ಬಂದಿ ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
Advertisement
Advertisement
ಹಾಲಿನ ಡೈರಿ ಬಿಎಂಸಿ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಹಾಲಿನ ಮಿಶ್ರಣ ಅಕ್ರಮ ವಿಚಾರ ಬಯಲಾಗ್ತಿದ್ದಂತೆ ಸ್ವತಃ ಚಿಮುಲ್ ಎಂ.ಡಿ ಶ್ರೀನಿವಾಸಗೌಡ ಅಲರ್ಟ್ ಆಗಿದ್ದಾರೆ. ಡೈರಿಯ ಸಹಾಯಕ ಚೇತನ್‌ನನ್ನ ಕೆಲಸದಿಂದ ವಜಾ ಮಾಡಿದ್ದಾರೆ. ಹಾಲಿನ ಟ್ಯಾಂಕರ್‌ನ ಚಾಲಕನ ಮಾರ್ಗ ಬದಲಾವಣೆ ಮಾಡಿ, ಹಾಲಿಗೆ ನೀರು ಮಿಶ್ರಣ ಕಳ್ಳಾಟ ತನಿಖೆಗೆ ಸಮಿತಿಯೊಂದನ್ನ ರಚಿಸಿದ್ದು ಅಕ್ರಮ ತಡೆಯುವ ಭರವಸೆ ನೀಡಿದ್ದಾರೆ.