ಬಳ್ಳಾರಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯನ್ನು ಸಿಸಿಬಿ (CCB) ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಹಾಲಶ್ರೀ ಸ್ವಾಮೀಜಿಗಾಗಿ (Abhinava Halashree) ಶೋಧ ಕಾರ್ಯ ಆರಂಭಗೊಂಡಿದೆ.
ಸ್ವಾಮೀಜಿಯ ಮನೆ ಹಾಗೂ ಹಿರೇಹಡಗಲಿಯ ಮಠದಲ್ಲಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಅಲ್ಲದೇ ಹಾಲಶ್ರೀ ಮನೆ ಮತ್ತು ಮಠದ ಸಿಸಿಟಿವಿ ಡಿವಿಆರ್‌ನ್ನು ಸಿಸಿಬಿ ವಶಕ್ಕೆ ಪಡೆದಿದೆ. ಇಷ್ಟೇ ಅಲ್ಲದೇ ಆರೋಪಿಯ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇದಕ್ಕಾಗಿ ಹರಪನಹಳ್ಳಿ ಹಾಗೂ ದಾವಣಗೆರೆಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಹಲವು ಕಡೆ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ನಾನು ಓದಿದ್ದು 7ನೇ ಕ್ಲಾಸ್ – ಮೋಸಹೋದ ಕಥೆಯನ್ನು ವಿನಯ್ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ
ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಯಾವುದೇ ಸುಳಿವಿಲ್ಲದಂತೆ ತಲೆಮರೆಸಿಕೊಂಡಿದ್ದಾರೆ. ಸ್ವಾಮೀಜಿ ವಿಚಾರವಾಗಿ ಈಗಾಗಲೇ ಬಂಧನವಾಗಿರುವ ಎ1 ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವಾಗ, ಸ್ವಾಮೀಜಿ ಬಂಧನವಾದ ಬಳಿಕ ದೊಡ್ಡವರ ಹೆಸರು ಹೊರ ಬರಲಿದೆ ಎಂದು ಹೇಳಿದ್ದಳು. ಈ ಹೇಳಿಕೆ ಪ್ರಕರಣದಲ್ಲಿ ಸಂಚಲನವನ್ನೂ ಮೂಡಿಸಿತ್ತು.
ಕಳೆದ ಆಗಸ್ಟ್‌ನಲ್ಲಿ ಸ್ವಾಮೀಜಿ ಸಹ ದೂರು ನೀಡಿದ್ದು, ಗೋವಿಂದ ಬಾಬು ಅವರನ್ನು ಬೇಟಿಯಾಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಆದರೆ ಪ್ರಕರಣದ ಪ್ರಮುಖ ಹಾಗೂ ಮೂರನೇ ಆರೋಪಿ ಎನಿಸಿಕೊಂಡ ಅವರು ತಲೆ ಮರೆಸಿಕೊಂಡಿರುವುದು ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಸ್ವಾಮೀಜಿ ಬಂಧನದ ಬಳಿಕವಷ್ಟೇ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ – ಸಿಸಿಬಿಯಿಂದ ಸ್ಥಳ ಮಹಜರು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]