ಅಡ್ಡದಾರಿ ಹಿಡಿದು ಪೊಲೀಸರ ಅತಿಥಿಯಾದ ಸ್ಯಾಂಡಲ್‍ವುಡ್ ನಿರ್ಮಾಪಕ

Public TV
1 Min Read
manunath producer

ಬೆಂಗಳೂರು: ಸಿನಿಮಾಗೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ವಂಚನೆಗಿಳಿದಿದ್ದ ನಿರ್ಮಾಪಕನನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸಿನಿಮಾ ನಿರ್ಮಾಪಕ ಮಂಜುನಾಥ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಕಾಮಿಡಿ ಸ್ಟಾರ್ ಕೋಮಲ್ ಕುಮಾರ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಣ ಮಾಡಿದ್ದ. ಸಿನಿಮಾ ನಿರ್ಮಾಣ ಕೋಟ್ಯಂತರ ರೂ. ಬಂಡವಾಳ ಹಾಕಿದ್ದ. ಆದರೆ ಸಿನಿಮಾ ರಿಲೀಸ್ ಆಗಿ ಬಿಸಿನೆಸ್ ಲಾಸ್ ಆಗಿತ್ತು.

cinema fraud

ಈ ಬೆನ್ನಲ್ಲೇ ನಿರ್ಮಾಪಕ ಮಂಜುನಾಥ್ ರಾಜಾಜಿನಗರದಲ್ಲಿ ಸೈಟ್, ನಿವೇಶನಗಳನ್ನು ಸೇಲ್ ಮಾಡಿಸೋದಾಗಿ ಕಂಪನಿ ತೆಗೆದಿದ್ದ. ಈಗಲ್ ಟ್ರೀ ಬಿಲ್ಡರ್ಸ್ ಹಾಗೂ ಡೆವಲಪರ್ಸ್ ಡಾಟ್ ಎಂಬ ಕಂಪನಿ ಹೆಸರಲ್ಲಿ ಕಚೇರಿ ಓಪನ್ ಮಾಡಿದ್ದ. ಅಷ್ಟೇ ಅಲ್ಲದೇ ನಿವೇಶನ ಮಾರಾಟ ಮಾಡುವುದಾಗಿ ಜಾಹೀರಾತು ನೀಡಿದ್ದ.

ಪುಷ್ಪಕುಮಾರ್ ಎಂಬಾತ ಜಾಹಿರಾತು ನೋಡಿ ನಿರ್ಮಾಪಕ ಮಂಜುನಾಥ್‍ನನ್ನು ಸಂಪರ್ಕ ಮಾಡಿದ್ದ. ಆಗ ಮಂಜುನಾಥ್ ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಹಂತ ಹಂತವಾಗಿ 2 ಲಕ್ಷ ಹಾಕಿಸಿಕೊಂಡಿದ್ದ. ಅಷ್ಟೇ ಅಲ್ಲದೇ ಬೇರೆ ಯಾರದ್ದೋ ಸೈಟ್ ತೋರಿಸಿ ಕೊಡಿಸೋದಾಗಿ ನಂಬಿಸಿದ್ದರು. ಇದನ್ನೂ ಓದಿ: ಮಕ್ಕಳ ಅಶ್ಲೀಲ ಚಿತ್ರಗಳು, ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ – ತಪ್ಪೊಪ್ಪಿಕೊಂಡ ಚರ್ಚ್ ಲೀಡರ್

Police Jeep

ತಕ್ಕ ದಾಖಲೆಗಳು ಕೇಳಿದಾಗ ನಿರ್ಮಾಪಕನ ಬಂಡವಾಳ ಬಯಲಿಗೆ ಬಂದಿದೆ. ಈ ಸಂಬಂಧ ಪುಷ್ಪಕುಮಾರ್ ರಾಜಾಜಿನಗರ ಠಾಣೆಗೆ ದೂರು ನೀಡಿದ್ದ. ದೂರು ದಾಖಲಿಸಿಕೊಂಡ ಪೊಲೀಸರು ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ್, ಚಂದ್ರಶೇಖರ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಾರು- ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Share This Article
Leave a Comment

Leave a Reply

Your email address will not be published. Required fields are marked *