ದಾವಣಗೆರೆ: ರೈತರಿಂದ (Farmers) ಮೆಕ್ಕೆಜೋಳ ಹಾಗೂ ಭತ್ತ ಖರೀದಿಸಿ ಅವರಿಗೆ ಹಣ ನೀಡದೆ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನು ದಾವಣಗೆರೆಯ (Davanagere) ಸಿಇಎನ್ ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶ್ರೀನಿವಾಸ್ ಭೋವಿ ಎಂದು ಗುರುತಿಸಲಾಗಿದೆ. ಆರೋಪಿ ರಾಜ್ಯದ ಹಲವು ಕಡೆಗಳಲ್ಲಿ ರೈತರಿಂದ ಮೆಕ್ಕೆಜೋಳ ಹಾಗೂ ಭತ್ತ ಖರೀದಿ ಮಾಡಿದ್ದ. ಆದರೆ ರೈತರಿಗೆ ಹಣ ಕೊಡದೇ ವಂಚಿಸಿದ್ದ. ಆತನ ವಿರುದ್ಧ ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.
ಶ್ರೀನಿವಾಸ್ ಭೋವಿ ರಾಜ್ಯದಲ್ಲಿ ಮಾತ್ರವಲ್ಲದೇ ಆಂಧ್ರ ಪ್ರದೇಶದ ತಿರುಪತಿ (Tirupati) ಜಿಲ್ಲೆಯಲ್ಲೂ ರೈತರಿಗೆ ವಂಚನೆ ಮಾಡಿದ್ದಾನೆ. ಆತನ ವಿರುದ್ದ ಸತ್ಯವೇಡು ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಬಾಡಾ ಕ್ರಾಸ್ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.