ಬೆಂಗಳೂರು: ಕೇಂದ್ರ ಲೋಕಾಸೇವಾ ಆಯೋಗದ (UPSC) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ (OBC) ವಿದ್ಯಾರ್ಥಿಗಳಿಗೆ ಬೆಂಗಳೂರು (Bengaluru) ಹಾಗೂ ದೆಹಲಿಯಲ್ಲಿ (Delhi) ಉಚಿತ ವಸತಿ ವ್ಯವಸ್ಥೆ (Free Accommodation) ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಸೂಚನೆ ನೀಡಿದರು. ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ.
Advertisement
ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Advertisement
Advertisement
100% ರಷ್ಟು ಗುರಿ ಸಾಧಿಸಿ:
ಬಜೆಟ್‌ನಲ್ಲಿ ಇಲಾಖೆಗೆ ನೀಡಲಾಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಮಾರ್ಚ್ ವೇಳೆಗೆ 100% ರಷ್ಟು ಗುರಿ ಸಾಧಿಸಬೇಕು. ಮಾರ್ಚ್ ತಿಂಗಳವರೆಗೆ ಹಣ ಉಳಿಸಿಕೊಂಡು ತರಾತುರಿಯಲ್ಲಿ ಹಣ ವ್ಯಯಿಸುವ ಕೆಲಸ ಆಗಬಾರದು. ಅವಧಿಗೂ ಮುನ್ನ ಬಳಕೆ ಮಾಡಿದರೆ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
Advertisement
ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಪ್ರಸ್ತುತ ಕ್ಷೇತ್ರದಲ್ಲಿ ಆಯಾ ಶಾಸಕರು ಕಳುಹಿಸುತ್ತಿರುವುದು ತಡವಾಗುತ್ತಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಕೂಡಲೇ ಶಾಸಕರಿಗೆ ನವೆಂಬರ್ ಒಳಗೆ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸುವಂತೆ ಪತ್ರ ಬರೆಯಿರಿ ಎಂದು ಸಲಹೆ ನೀಡಿದರು.
ಇಲಾಖೆಯಲ್ಲಿನ ಶೈಕ್ಷಣಿಕ ಸಾಲ, ಸ್ವಾವಲಂಬಿ ಸಾಲ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಪ್ರತಿಯೊಂದು ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕು. ಇಲಾಖೆ ವ್ಯಾಪ್ತಿಗೆ ಬರುವ ನಿಗಮಗಳ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ರಾಜ್ಯದ ಜನರಿಗೆ ಮಾಹಿತಿ ಒದಗಿಸಬೇಕು. ಈ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ವನ್ಯಜೀವಿಯಿಂದ ಜೀವಹಾನಿ – ಸ್ಥಳ ಭೇಟಿಗೆ ಈಶ್ವರ್ ಖಂಡ್ರೆ ಸೂಚನೆ
ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಒಕ್ಕಲಿಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ ಮುರಳೀಧರ್, ಲಿಂಗಾಯತ ಅಭಿವೃದ್ಧಿ ನಿಗಮದ ಅಮರೇಗೌಡ ಮಾಲಿ ಪಾಟೀಲ್, ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Web Stories