ಲಕ್ನೋ: ಇಂದಿನಿಂದ ಲಕ್ನೋನ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಎಲ್ಲಾ ವಯಸ್ಕರಿಗೆ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್‍ಗಳನ್ನು ಉಚಿತವಾಗಿ ನೀಡಲು ಉತ್ತರ ಪ್ರದೇಶ ಆರೋಗ್ಯ ಇಲಾಖೆ ಸೂಚಿಸಿದೆ.
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜುಲೈ 15 ರಿಂದ 75 ದಿನಗಳವರೆಗೆ ಎಲ್ಲಾ ವಯಸ್ಕರಿಗೆ ಸರ್ಕಾರಿ ಕೇಂದ್ರಗಳಲ್ಲಿ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್‍ಗಳನ್ನು ಉಚಿತವಾಗಿ ನೀಡುವುದಾಗಿ ಬುಧವಾರ ಕೇಂದ್ರವು ತಿಳಿಸಿತ್ತು. ಇದನ್ನೂ ಓದಿ: ನಮ್ಗೆ ನ್ಯಾಯ ಬೇಕು, ದುಡ್ಡು ಬೇಡ – ಸಿದ್ದು ಕೊಟ್ಟ 2 ಲಕ್ಷ ರೂ. ಎಸೆದ ಮುಸ್ಲಿಂ ಮಹಿಳೆ
ಇದಕ್ಕೂ ಮುನ್ನ ಸರ್ಕಾರಿ ಕೇಂದ್ರಗಳಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಬೂಸ್ಟರ್ ಡೋಸ್‍ಗಳನ್ನು ಉಚಿತವಾಗಿ ನೀಡಲಾಗುತ್ತಿತ್ತು. 18 ಮತ್ತು 60 ವರ್ಷ ವಯಸ್ಸಿನ ಜನರು ಹಣ ಪಾವತಿಸಿದ ನಂತರ ಖಾಸಗಿ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಬೇಕಾಗಿತ್ತು. ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದೊಂದು ಕೊಲೆ ಅಂದ ಸಹೋದರಿ
ಲಕ್ನೋದಲ್ಲಿ ಇಲ್ಲಿಯವರೆಗೂ 18-44 ವಯಸ್ಸಿನ ಸುಮಾರು 26.68 ಲಕ್ಷ ಮಂದಿ ತಮ್ಮ ಮೊದಲ ಡೋಸ್ ಪಡೆದಿದ್ದಾರೆ. ಸುಮಾರು 22.72 ಲಕ್ಷ ಜನರು ಎರಡನೇ ಡೋಸ್ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ 17,58,99,067 ಜನರು ತಮ್ಮ ಮೊದಲ ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ ಮತ್ತು 16,40,30,246 ಜನರು ತಮ್ಮ ಎರಡನೇ ಡೋಸ್ ಅನ್ನು ಪಡೆದಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ 37,35,194 ಮಂದಿ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 366 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಮತ್ತು ಸುಮಾರು 377 ರೋಗಿಗಳು ಚೇತರಿಸಿಕೊಂಡಿದ್ದಾರೆ.