ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ.
SSLC ಪೂರಕ ಪರೀಕ್ಷೆಗಳು ಜೂನ್ 27 ರಿಂದ ಜುಲೈ 4ರ ವರೆಗೆ ನಡೆಯಲಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿದ್ದಾರೆ: ಶ್ರೀರಾಮುಲು
Advertisement
Advertisement
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 19 ರಂದು ಪ್ರಕಟವಾಗಿತ್ತು. ಈ ಬಾರಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂ.27 ರಿಂದ ಪೂರಕ ಪರೀಕ್ಷೆ ನಡೆಯಲಿದೆ.