– ಸಿಎಂಗೆ ಪತ್ರದ ಮೂಲಕ ಯು.ಟಿ.ಖಾದರ್ ಮನವಿ
ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಯನ್ನ ಡಯಾಲಿಸ್ (Dialysis) ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ (U T Khader) ಸಿಎಂಗೆ ಪತ್ರ ಬರೆದಿದ್ದಾರೆ.
ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದ ಶಕ್ತಿ ಯೋಜನೆ, ಗಂಡಸರಿಗೂ ವಿಸ್ತರಿಸುವಂತೆ ಬೇಡಿಕೆಯೊಂದು ಬಂದಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಖುದ್ದು ಯು.ಟಿ.ಖಾದರ್ ಅವರೇ ಪತ್ರ ಬರೆದು ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು
ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಿತ್ಯ ಪುರುಷರು ಸಾರಿಗೆ ಬಸ್ ಬಳಕೆ ಮಾಡುತ್ತಾರೆ. ಇದರಲ್ಲಿ ಅನೇಕ ಖಾಯಿಲೆ ಇರುವ ಪುರುಷ ಪ್ರಯಾಣಿಕರು ಕೂಡ ಸಂಚಾರ ಮಾಡುತ್ತಾರೆ. ಆ ಪೈಕಿ ಡಯಾಲಿಸಿಸ್‌ಗೆ ಒಳಗಾಗಿರೋ ಪುರುಷ ಪ್ರಯಾಣಿಕರನ್ನು ಶಕ್ತಿ ಯೋಜನೆಗೆ ತರುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ
ವಾರಕ್ಕೆ 2-3 ಬಾರಿ ಡಯಾಲಿಸಿಸ್‌ಗಾಗಿ ಪುರುಷ ರೋಗಿಗಳು ಸಂಚಾರ ಮಾಡುವುದರಿಂದ ಹೆಚ್ಚು ಖರ್ಚಾಗುತ್ತದೆ. ಹೀಗಾಗಿ ಅಂತವರಿಗೆ ಅನೂಕೂಲ ಆಗುವ ನಿಟ್ಟಿನಲ್ಲಿ, ಶಕ್ತಿ ಯೋಜನೆ ವ್ಯಾಪ್ತಿಗೆ ತರಬೇಕೆಂದು ಆರ್‌ಟಿಐ ಕಾರ್ಯಕರ್ತ ಸೈಯದ್ ರೆಹಮಾನ್ ಸಮೀನ್, ಸ್ಪೀಕರ್ ಯು.ಟಿ.ಖಾದರ್‌ಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ
ಆರ್‌ಟಿಐ ಕಾರ್ಯಕರ್ತರ ಮನವಿ ಬಳಿಕ ಇದನ್ನ ಪರಿಶೀಲನೆ ನಡೆಸುವಂತೆ ಸಿಎಂಗೆ ಸ್ಪೀಕರ್ ಪತ್ರ ಬರೆದು, ಮನವಿ ಮಾಡಿದ್ದಾರೆ. ಕಿಡ್ನಿ ಸಮಸ್ಯೆ ಇರುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಬೇಕಾದ ವ್ಯವಸ್ಥೆ ಮಾಡಲು ನಿರ್ದೇಶನ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್