ಬೆಂಗಳೂರು: ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy)ತಿಳಿಸಿದ್ದಾರೆ.
ಶಕ್ತಿ ಯೋಜನೆ (Shakti Scheme) ನಿಲ್ಲುತ್ತದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ (Congress Government) ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ!
Advertisement
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ.
ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು… pic.twitter.com/Yuj1fznS6v
— Ramalinga Reddy (@RLR_BTM) June 8, 2024
ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡುವುದಕ್ಕೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು 5,500 ಕೋಟಿ ರೂ. ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: T20 World Cup:ಇಂದು ಇಂಡೋ-ಪಾಕ್ ಹೈವೋಲ್ಟೇಜ್ ಕದನ – 1 ಸೆಕೆಂಡ್ ಜಾಹೀರಾತಿಗೆ 4 ಲಕ್ಷ ರೂ.!
Advertisement
ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತದೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಸ್ಪಷ್ಟನೆ ನೀಡಿದರು.
Advertisement