ನವದೆಹಲಿ: 18ರಿಂದ 59 ವಯೋಮಾನದವರಿಗೆ ಕೋವಿಡ್ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ. 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಬೂಸ್ಟರ್ ಡೋಸ್‌ನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಜು.15ರಿಂದ 75 ದಿನಗಳ ವರೆಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು RSS, SDPIನಿಂದ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
Advertisement
Advertisement
18-59 ವಯೋಮಾನದ 77 ಕೋಟಿ ಜನಸಂಖ್ಯೆ ದೇಶದಲ್ಲಿದ್ದು, ಈ ಪೈಕಿ ಕೇವಲ ಶೇ.1 ಕ್ಕಿಂತ ಕಡಿಮೆ ಮಂದಿ ಬೂಸ್ಟರ್ ಡೋಸ್ ಪಡೆದುಕೊಂಡಿದ್ದಾರೆ. 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಅಂದಾಜು 16 ಕೋಟಿ ಜನರ ಪೈಕಿ ಶೇ.26 ಮಂದಿ ಸೇರಿದಂತೆ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಬೂಸ್ಟರ್ ಡೋಸ್ ಸ್ವೀಕರಿಸಿದ್ದಾರೆ.
Advertisement
ಸರ್ಕಾರವು 75 ದಿನಗಳ ಕಾಲ ಲಸಿಕೆ ನೀಡಿಕೆಯ ವಿಶೇಷ ಆಂದೋಲನವನ್ನು ಪ್ರಾರಂಭಿಸಲು ಯೋಜಿಸಿದೆ. ಈ ಅವಧಿಯಲ್ಲಿ 18 ರಿಂದ 59 ವರ್ಷ ವಯಸ್ಸಿನವರಿಗೆ ಜುಲೈ 15 ರಿಂದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಲಾಗುವುದು. ಇದನ್ನೂ ಓದಿ: ಉತ್ತರ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ – ತಡೆ ನೀಡಲ್ಲ ಎಂದ ಸುಪ್ರೀಂ
Advertisement
ಕೋವಿಡ್ ಲಸಿಕೆಯ ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ನಡುವಿನ ಅಂತರವನ್ನು 9ರಿಂದ 6 ತಿಂಗಳಿಗೆ ಇಳಿಸಲಾಗಿದೆ. ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ (ಎನ್‌ಟಿಎಜಿಐ) ಶಿಫಾರಸನ್ನು ಆಧರಿಸಿ ಅಂತರವನ್ನು ಕಡಿತಗೊಳಿಸಲಾಗಿದೆ.