– 10% ಬದಲು 10 ಯೂನಿಟ್ ಹೆಚ್ಚುವರಿ ವಿದ್ಯುತ್ ನೀಡಲು ಸಂಪುಟ ನಿರ್ಧಾರ
ಬೆಂಗಳೂರು: ಗೃಹಜ್ಯೋತಿ (Gruha Jyothi) ನಿಯಮದಲ್ಲಿ ಬದಲಾವಣೆ ಮಾಡಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಲು ಸಂಪುಟ ಸಮ್ಮತಿ ನೀಡಿದೆ.
Advertisement
Advertisement
ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ (K.J.George), ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತಾ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಫೆಬ್ರವರಿ16 ರಂದು ರಾಜ್ಯ ಬಜೆಟ್
Advertisement
ಮುಂದಿನ ತಿಂಗಳ ಬಿಲ್‌ನಿಂದಲೇ ಇದನ್ನ ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ.
Advertisement
ಉದಾಹರಣೆ: 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10% ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ. ಇದನ್ನೂ ಓದಿ: ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ