ಚಂಡೀಗಢ: ರಾಜ್ಯದಲ್ಲಿ ಚುನಾವಣೆಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಭರವಸೆ ನೀಡಿದ್ದಾರೆ.
ಇದೇ ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆ ಚುನಾವಣೆಗೆ ಇದ್ದು, ರೂಪನಗರದಲ್ಲಿ ರ್‍ಯಾಲಿ ನಡೆಸಿ ಇಂದು ಮಾತನಾಡಿದ ಅವರು, ನಾವು ರಾಜ್ಯದಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಕಿರುಕುಳ ಎದುರಿಸುತ್ತಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
Advertisement
Advertisement
ಈ ವಾರದ ಆರಂಭದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಚಿತವಾಗಿ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಂಜಾಬ್ ಜನತೆಗೆ 1 ಲಕ್ಷ ಉದ್ಯೋಗ, ಆರು ತಿಂಗಳಲ್ಲಿ ಬಡವರಿಗೆ ವಸತಿ ಕಲ್ಪಿಸುವ ಮತ್ತು ಸಣ್ಣ ಉದ್ಯಮಿಗಳಿಗೂ ತೆರಿಗೆ ರಿಯಾಯಿತಿ ನೀಡುತ್ತೇವೆ ಎಂದು ಭರವಸೆ ನೀಡಿದ್ದರು.
Advertisement
ಅಟ್ಟ-ದಾಲ್ (ಹಿಟ್ಟು-ಮಸೂರ) ಹೊಟ್ಟೆಯನ್ನು ಮಾತ್ರ ತುಂಬುತ್ತದೆ. ಆದರೆ ಪಂಜಾಬಿನ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಖಾಸಗಿ ಸಂಸ್ಥೆಗಳಲ್ಲಿ ಓದುವುದು ತುಂಬಾ ದುಬಾರಿಯಾಗಿದೆ. ನಮ್ಮ ಪೋಷಕರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದರಿಂದ ನಾವು ವಿದ್ಯಾವಂತರಾಗಿದ್ದೇವೆ. ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಒದಗಿಸಲು ನಾವು ನಿರ್ಧರಿಸಿದ್ದೇವೆ. ಚಮಕೌರ್ ಸಾಹಿಬ್‍ನಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
Advertisement
ಚುನಾವಣಾ ಆಯೋಗದ ಹಿಂದಿನ ಘೋಷಣೆಯಂತೆ ಫೆಬ್ರವರಿ 20 ರಂದು ಪಂಜಾಬ್‍ನಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ ಮತ್ತು ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್ ದೋಷಿ – CBI ಕೋರ್ಟ್