Connect with us

Corona

ಬಡವರಿಗೆ ಜೂನ್ 2021ರವರೆಗೆ ಉಚಿತ ರೇಷನ್: ಮಮತಾ ಬ್ಯಾನರ್ಜಿ

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಿನ ವರ್ಷ ಜೂನ್, 2021ರವರೆಗೆ ಉಚಿತ ರೇಷನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಜುಲೈ 15ರವರೆಗೆ ತಡೆಹಿಡಿಯಬೇಕು. ಹಾಗೆ ಕೊರೊನಾ ಪೀಡಿತ ಸ್ಥಳಗಳಿಂದ ಬರೋ ವಿಮಾನಗಳನ್ನ ತಡೆಯಬೇಕು. ಜನರ ಸಂಚಾರಕ್ಕೆ ಅನುಕೂಲಕ್ಕಾಗಿ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗಳು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಇಂದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, ಬೆಳಗ್ಗೆ 5.30ರಿಂದ 8.30ರೊಳಗೆ ವಾಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚಿನ ಜನರು ಭಾಗವಹಿಸುವಂತಿಲಲ್ಲ. ಅಂತ್ಯಕ್ರಿಯೆ, ತಿಥಿ ಅಂತಹ ಕಾರ್ಯಗಳಲ್ಲಿ 25ಕ್ಕಿಂತ ಹೆಚ್ಚು ಜನರು ಭಾಗಿಯಾಗಿಸುವಂತಿಲ್ಲ ಎಂದು ಹೇಳಿದ್ದಾರೆ.

ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ವರೆಗೂ ವಿಸ್ತರಿಸಿದ್ದು, ಐದು ತಿಂಗಳು ಉಚಿತ ಪಡಿತರ ನೀಡಲಾಗುವುದು ಎಂದು ಘೋಷಿಸಿದ್ದಾರೆ.