ಬೆಂಗಳೂರು: ಪ್ರಣಾಳಿಕೆಯಲ್ಲಿ ಕೊಟ್ಟ 5 ಗ್ಯಾರಂಟಿಗಳನ್ನು ಇಂದು ಕಾಂಗ್ರೆಸ್ (Congress Guarantee) ಘೋಷಣೆ ಮಾಡಿದೆ. ಈ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಹಾಗೂ ಸಿ.ಟಿ ರವಿಯನ್ನು ಕಾಂಗ್ರೆಸ್ ಕಾಲೆಳೆದಿದೆ.
,@nalinkateel ಅವರೇ,
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!
ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!
ಇದು ನಮ್ಮ ಗ್ಯಾರಂಟಿ.
— Karnataka Congress (@INCKarnataka) June 2, 2023
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ (Basavaraj Bommai) ಅವರೇ ನಿಮ್ಮ ಮನೆಗೂ ಫ್ರೀ!, ಶೋಭಾ ಕರಂದ್ಲಾಜೆ (Shobha Karandlaje) ಅವರೇ, ನಿಮಗೂ ಪ್ರಯಾಣ ಫ್ರೀ!, ಸಿ.ಟಿ ರವಿ (CT Ravi) ಅವರೇ, ನಿಮ್ಮ ಮನೆಯವರಿಗೂ 2,000 ಫ್ರೀ ಎಂದು ಟ್ವೀಟ್ ನಲ್ಲಿ ತಿಳಿಸುವ ಕಾಲೆಳೆದಿದೆ.
Advertisement
Advertisement
ಇಷ್ಟು ಮಾತ್ರವಲ್ಲದೆ ಪದವಿ ಪಡೆದ ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ. ಇದು ನಮ್ಮ ಗ್ಯಾರಂಟಿ ಎಂದು ಕಾಂಗ್ರೆಸ್ ಟ್ವೀಟ್‍ನಲ್ಲಿ ಬಿಜೆಪಿಯವರಿಗೆ ಟಾಂಗ್ ಕೊಟ್ಟಿದೆ.
Advertisement
ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.
ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ.
ಇದು ನಮ್ಮ ಬದ್ಧತೆ,
— Karnataka Congress (@INCKarnataka) June 2, 2023
ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಕಾಂಗ್ರೆಸ್ ತಿಳಿಸಿದೆ. ಇದನ್ನೂ ಓದಿ: ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಯಾರು ಅರ್ಜಿ ಸಲ್ಲಿಕೆ ಮಾಡಬಹುದು?