ಬೆಂಗಳೂರು: ಆಗಸ್ಟ್ 15ರಂದು ಪ್ರಯಾಣಿಕರಿಗೆ ಬಿಎಂಟಿಸಿ ಗುಡ್‍ನ್ಯೂಸ್ ನೀಡಿದ್ದು, ಇಡೀ ದಿನ ಬೆಂಗಳೂರಿನಾದ್ಯಂತ ಪ್ರಯಾಣಿಕರು ವೋಲ್ವೋ ಬಸ್ ಸೇರಿದಂತೆ ಬಿಎಂಟಿಸಿಯ ಎಲ್ಲಾ ಬಸ್‍ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
75ನೇ ಸ್ವತಂತ್ರ ಭಾರತದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಘೋಷಣೆಯನ್ನು ಮಾಡಿದೆ. ಅಗಸ್ಟ್ 15ರಂದು 24 ಗಂಟೆಗಳ ಕಾಲ ವೋಲ್ವೋ ಬಸ್ ಸೇರಿದಂತೆ ಎಲ್ಲಾ ಬಿಎಂಟಿಸಿ ಬಸ್‍ನಲ್ಲೂ ಪ್ರಯಾಣಿಕರು ಉಚಿತವಾಗಿ ಸಂಚರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕೃತವಾಗಿ ಘೋಷಣೆ ಮಾಡಿದ್ದು, ಒಟ್ಟಾರೆಯಾಗಿ ಬಿಎಂಟಿಸಿಗೆ 3 ಕೋಟಿ ರೂ. ಹೊರೆ ಬೀಳಲಿದೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್ ಹತ್ಯೆಗೆ ಸ್ಕೆಚ್ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್
Advertisement
Advertisement
ಇನ್ನೂ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು 75 ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಮಾಡಲಾಗಿದೆ. ಈಗಾಗಲೇ ಬೆಂಗಳೂರಿನಾದ್ಯಂತ 90 ಎಲೆಕ್ಟ್ರಿಕ್ ಬಸ್‍ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲು ಸಿದ್ಧವಾಗಿದೆ. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಟೀಕೆಗೆ ತಿರುಗೇಟು – ಕಾಂಗ್ರೆಸ್ ಡಬಲ್ ಸ್ಟೇರಿಂಗ್ ಪಕ್ಷವೆಂದ ಬಿಜೆಪಿ