ಪ್ಯಾರೀಸ್: ಫ್ರಾನ್ಸ್‌ನ (France) ವೈದ್ಯನೊಬ್ಬ 30 ವರ್ಷಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದ 300 ಮಕ್ಕಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಕೋರ್ಟ್‌ನಲ್ಲಿ ವಿಚಾರಣೆ ವೇಳೆ ತಾನೊಬ್ಬ `ಶಿಶುಕಾಮಿ’ ಎಂದು ಆತನೇ ಒಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.
ಆರೋಪಿ ವೈದ್ಯ ಜೋಯೆಲ್ ಲೇ ಸ್ಕಾನರ್ಕ್ (74) ವೆನಿಸ್ ಕೋರ್ಟ್‌ನಲ್ಲಿ (Venice Court) ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ
ಪೊಲೀಸರು, ಅತ್ಯಾಚಾರ ಆರೋಪದಡಿ ವೈದ್ಯನ ಮನೆಯಲ್ಲಿ ಶೋಧ ನಡೆಸಿದಾಗ ಆತನೇ ಬರೆದಿರುವ ದಾಖಲೆಗಳು, ಫೋಟೋಗಳು, ವಿಡಿಯೋಗಳು ಸಿಕ್ಕಿವೆ. ಗಂಡು ಹಾಗೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕಲಬುರಗಿ | ಲಾಡ್ಲೇ ಮಶಾಕ್ ದರ್ಗಾದ ಶಿವಲಿಂಗ ಪೂಜೆಗೆ ಹಿಂದೂ ಕಾರ್ಯಕರ್ತರಿಂದ ಸಿದ್ಧತೆ
ಈ ಹಿನ್ನೆಲೆಯಲ್ಲಿ ಆತನನ್ನು ವೆನಿಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಸ್ವತಃ ವೈದ್ಯನೇ ತಪ್ಪೊಪ್ಪಿಕೊಂಡು, ಕಳೆದ 30 ವರ್ಷದಿಂದ ಈ ಕೃತ್ಯ ಎಸಗಿದ್ದಾಗಿ ಹೇಳಿದ್ದಾನೆ. 2020ರಲ್ಲಿಯೂ 4 ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಆತನಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಸಾಲುಗಟ್ಟಿ ನಿಂತ ಶಿವಭಕ್ತರು