– 285 ಕೋಟಿ ರೂ. ವಂಚನೆ ಆರೋಪ
ಫ್ರಾನ್ಸ್: ಎಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ಫ್ರೆಂಚ್ ಸರ್ಕಾರವು ಸ್ವಯಂ ಘೋಷಿತ ದೇವಮಾನವ, ಅತ್ಯಾಚಾರ ಆರೋಪಿ ನಿತ್ಯಾನಂದ ವಿರುದ್ಧ ತನಿಖೆ ಆರಂಭಿಸಿದೆ.
ಫ್ರೆಂಚ್ ಪ್ರಜೆ, ನಿತ್ಯಾನಂದನ ಮಾಜಿ ಭಕ್ತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ನಿತ್ಯಾನಂದನ ತನಗೆ 285 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಮಾಜಿ ಭಕ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಹೀಗಾಗಿ ಫ್ರಾನ್ಸ್‍ನ ಆಂತರಿಕ ಸಚಿವಾಲಯವು ನಿತ್ಯಾನಂದನ ವಿರುದ್ಧ ವಂಚನೆಯ ವಿವರಗಳನ್ನು ಸಂಗ್ರಹಿಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹೊಸ ದೇಶವನ್ನೇ ಕಟ್ಟಿದ ನಿತ್ಯಾನಂದ – ಕ್ಯಾಬಿನೆಟ್ ರಚನೆ, ಪ್ರಧಾನಿ ಆಯ್ಕೆ
Advertisement
Advertisement
ತನಿಖೆಯ ಭಾಗವಾಗಿ, ಫ್ರೆಂಚ್ ಸರ್ಕಾರವು ನಿತ್ಯಾನಂದನ ಬ್ಯಾಂಕ್ ಖಾತೆಯ ವಿವರಗಳನ್ನು ಸಹ ಕೋರಿದೆ ಎಂದು ವರದಿಯಾಗಿದೆ. ಫ್ರಾನ್ಸ್ ಮೂಲದ ಅನೇಕ ಭಕ್ತರು ದೂರು ನೀಡಿದ ನಂತರ, ಎಮ್ಯಾನುಯೆಲ್ ಮ್ಯಾಕ್ರೋನ್ ಸರ್ಕಾರವು ಇಂಟರ್-ಪೋಲ್ ಅನ್ನು ತನಿಖೆ ಆರಂಭಿಸಿದೆ. ಹೊತೆಗೆ ನವದೆಹಲಿಯಲ್ಲಿರುವ ಫ್ರೆಂಚ್ ರಾಯಭಾರಿ ಕಚೇರಿಗೆ ದೂರಿನ ವಿವರಣೆ ನೀಡಲಾಗಿದೆ. ಈ ಮೂಲಕ ಮಾಹಿತಿ ಸಂಗ್ರಹಿಸಲು ಫ್ರಾನ್ಸ್ ಸರ್ಕಾರದೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ನಿತ್ಯಾನಂದನ ಜೊತೆಗಿರುವ ಫೋಟೋ ನಕಲಿ – ಚಿನ್ಮಯಿ ಶ್ರೀಪಾದ ಸ್ಪಷ್ಟನೆ
Advertisement
ಸ್ವಯಂ ಘೋಷಿತ ದೇವ ಮಾನವ, ಅತ್ಯಾಚಾರ ಆರೋಪಿ ನಿತ್ಯಾನಂದ ಹಲವು ಆಶ್ರಮಗಳ ನಂತರ ಇದೀಗ ತನ್ನದೇ ದೇಶವನ್ನು ಕಟ್ಟಲು ಹೊರಟಿದ್ದಾನೆ. ಈಕ್ವೆಡಾರ್ ನಲ್ಲಿ ಖಾಸಗಿ ಹಿಮಪ್ರದೇಶವನ್ನು ಖರೀದಿಸಿದ್ದು, ಇದು ತನ್ನ ದೇಶ ಎಂಬಂತೆ ಬಿಂಬಿಸುತ್ತಿದ್ದಾನೆ. ಅಲ್ಲದೆ ಇದಕ್ಕಾಗಿ ಈಗಾಗಲೇ ಧ್ವಜ, ಲಾಂಛನ, ಪಾಸ್‍ಪೋರ್ಟ್‍ಗಳನ್ನು ಸಹ ಸಿದ್ಧಪಡಿಸಿದ್ದು, ಈ ದೇಶಕ್ಕೆ ಕೈಲಾಸ ಎಂದು ಹೆಸರಿಟ್ಟಿದ್ದಾನೆ.
Advertisement
ಈ ಹಿಮಪ್ರದೇಶವು ಟ್ರಿನಿಡಾಡ್ ಹಾಗೂ ಟೊಬಾಗೊ ಪ್ರದೇಶಕ್ಕೆ ಹತ್ತಿರವಾಗಿದೆ. ಆ ಪ್ರದೇಶವನ್ನು ಹಿಂದೂ ರಾಷ್ಟ್ರ ಎಂದು ಸ್ವಯಂ ಘೋಷಿತ ದೇವ ಮಾನವ ಕರೆದುಕೊಂಡಿದ್ದಾನೆ. ಪ್ರಧಾನಿ ಸೇರಿದಂತೆ ಸಚಿವ ಸಂಪುಟವನ್ನು ಸಹ ರಚಿಸಿದ್ದಾನೆ. ಅಲ್ಲದೆ ದೇಶಕ್ಕೆ ದೇಣಿಗೆ ನೀಡುವಂತೆ ಸಾರ್ವಜನಿಕ ಪ್ರಕಟಣೆಯನ್ನು ಸಹ ಹೊರಡಿಸಿದ್ದು, ಶ್ರೇಷ್ಠ ಹಿಂದೂ ರಾಷ್ಟ್ರ ಕೈಲಾಸದ ಪೌರತ್ವ ಪಡೆಯುವುದು ಒಂದು ಸದವಕಾಶ ಎಂದು ಹೇಳಿದ್ದ.