ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌ ಇಂದು ಭಾರತಕ್ಕೆ ಭೇಟಿ

Public TV
1 Min Read
FRANCE PRESIDENT

ಪ್ಯಾರೀಸ್/ನವದೆಹಲಿ:‌ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರಾನ್ (Emmanuel Macron) ಅವರು ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ 5.30ಕ್ಕೆ ಮ್ಯಾಕ್ರಾನ್ ಅವರನ್ನು ಸ್ವಾಗತಿಸಲಿದ್ದಾರೆ. ನಂತರ ಉಭಯ ದೇಶಗಳ ನಾಯಕರು ನಗರದಲ್ಲಿರುವ ಐತಿಹಾಸಿಕ, ಸಾಂಸ್ಕೃತಿಕ ಪ್ರಾಮುಖ್ಯತೆ ಪಡೆದಿರುವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯದಿಂದ ಹೇಳಿಕೆ ಬಿಡುಗಡೆ ಮಾಡಿದೆ.

ಮ್ಯಾಕ್ರಾನ್‌ ವೇಳಾಪಟ್ಟಿ: ಮಧ್ಯಾಹ್ನ 2:30: ಜೈಪುರ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮ್ಯಾಕ್ರಾನ್‌ ಅವರು 3:15 ಕ್ಕೆ  ಅಮೇರ್ ಕೋಟೆಗೆ ಭೇಟಿ ನೀಡಲಿದ್ದಾರೆ. ಸಂಜೆ 5:30ಕ್ಕೆ ಜಂತರ್ ಮಂತರ್ ಭೇಟಿ ಕೊಡಲಿದ್ದಾರೆ. ಸಂಜೆ 6 ಗಂಟೆಗೆ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಂತರ ಸಂಜೆ 6:15ಕ್ಕೆ ಹವಾ ಮಹಲ್‌ಗೆ ಭೇಟಿ ಕೊಟ್ಟು 7:15 ಕ್ಕೆ ಪ್ರಧಾನಿಯವರೊಂದಿಗೆ ಸಭೆ  ನಡೆಸಲಿದ್ದಾರೆ. ರಾತ್ರಿ 8:50ಕ್ಕೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲೆಂದು ಭಾರತಕ್ಕೆ ಭೇಟಿ ಕೊಡುತ್ತಿದ್ದಾರೆ. ಇದನ್ನೂ ಓದಿ: ತೆಲಂಗಾಣ ಅಧಿಕಾರಿಯ ಮನೆ, ಕಚೇರಿಗಳಿಗೆ ACB ದಾಳಿ- 100 ಕೋಟಿಗೂ ಅಧಿಕ ಆಸ್ತಿ ಪತ್ತೆ

ಇಂದಿನಿಂದ ಎರಡು ದಿನಗಳ ಕಾಲ ಭಾರತದಲ್ಲಿರುವ ಅವರು, ಜೈಪುರದ ಅಂಬರ್ ಕೋಟೆ, ಹವಾ ಮಹಲ್ ಮತ್ತು ಜಂತರ್ ಮಂತರ್‌ ನ ಖಗೋಳ ವೀಕ್ಷಣಾಲಯಕ್ಕೆ ಭೇಟಿ ನೀಡಲಿದ್ದಾರೆ.

Share This Article