ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್ತಿನಲ್ಲಿ ಇಂದು ಭಾರೀ ಹೈಡ್ರಾಮಾ ನಡೆದಿದೆ. ಈ ಹೈಡ್ರಾಮಾದಿಂದ ಸದ್ಯಕ್ಕೆ ಇಮ್ರಾನ್ ಖಾನ್ ಪಾರಾಗಿದ್ದಾರೆ.
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ತಿರಸ್ಕೃತಗೊಂಡಿದೆ. ತಿರಸ್ಕೃತಗೊಂಡ ಬೆನ್ನಲ್ಲೇ ರಾಷ್ಟ್ರಪತಿ ಆರಿಫ್ ಆಲ್ವಿ ಅವರು ಸರ್ಕಾರವನ್ನು ವಿಸರ್ಜಿಸಿದ್ದಾರೆ.
Advertisement
ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಪಾಕ್ ನ್ಯಾಷನಲ್ ಅಸೆಂಬ್ಲಿ ಉಪ ಸ್ಪೀಕರ್ ತಿರಸ್ಕರಿಸಿದ್ದಾರೆ. ಈ ನಿರ್ಣಯ ಸಂವಿಧಾನದ ವಿಧಿ 5ಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ನಿರ್ಣಯ ತಿರಸ್ಕರಿಸಿ ಕಲಾಪವನ್ನು ಮುಂದೂಡಿದ್ದಾರೆ. ಈ ಮೂಲಕ ಇಮ್ರಾನ್ ಖಾನ್ ಪ್ರಧಾನಿಯಾಗಿಯೇ ಮುಂದುವರಿಯಲಿದ್ದಾರೆ. ಇದನ್ನೂ ಓದಿ: ನಿಷೇಧಾಜ್ಞೆ ಜಾರಿ, ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ- ಶ್ರೀಲಂಕಾದಲ್ಲಿ ಪರಿಸ್ಥಿತಿ ಹೇಗಿದೆ?
Advertisement
Advertisement
ಕೂಡಲೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್, ಅಸೆಂಬ್ಲಿ ವಿಸರ್ಜನೆಗೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ಬರೆದಿದ್ದಾನೆ. ಪ್ರಜಾಸತಾತ್ಮಕ ಹಾದಿಯಲ್ಲಿ ಚುನಾವಣೆ ನಡೆಯಬೇಕು. ಚುನಾವಣೆಗೆ ಸಜ್ಜಾಗುವಂತೆ ಪಾಕಿಸ್ತಾನದ ಜನರಿಗೆ ಕರೆ ನೀಡುವುದಾಗಿ ಹೇಳಿದರು.
Advertisement
ಖಾನ್ ದೇಶವನ್ನುದ್ದೇಶಿಸಿ ಮಾತನಾಡಿದ ಬೆನ್ನಲ್ಲೇ ಪಾಕ್ ರಾಷ್ಟ್ರಪತಿ ಆರಿಫ್ ಅಲ್ವಿ ಸಂಸತ್ ವಿಸರ್ಜಿಸಿದ್ದು, 90 ದಿನಗಳ ಒಳಗೆ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಲಂಕಾ ನೌಕಪಡೆ
ಪಾಕ್ ಸಂಸತ್‌ನಲ್ಲಿ ಅವಿಶ್ವಾಸ ಮಂಡನೆ ಬಳಿಕ ಇಮ್ರಾನ್ ಖಾನ್ ರಾಜಿನಾಮೆ ಕೊಡಬೇಕೆಂಬ ಕೂಗು ಕಳೆದ ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ ಇಮ್ರಾನ್ ಖಾನ್ ರಾಜಿನಾಮೆ ಕೊಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಹೊಸ ಚುನಾವಣೆಗೆ ಕರೆ ನೀಡಿದ್ದಾರೆ.
ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಕೊನೆ ಬಾಲ್‌ವರೆಗೂ ಹೋರಾಡುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿದ್ದರು. ಈ ಮಾತನ್ನು ಇಮ್ರಾನ್ ಖಾನ್ ಉಳಿಸಿಕೊಂಡಿದ್ದಾರೆ.