ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ ಸಿದ್ಧಾರ್ಥ್ ವಿರುದ್ಧ ಹೈದರಾಬಾದ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
Advertisement
ಬಿಜೆಪಿ ನಾಯಕರಾದ ನೀಲಂ ಭಾರ್ಗವ ರಾಮ್ ಮತ್ತು ಪ್ರೇರಣಾ ಟಿ ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ನಟ ಸಿದ್ಧಾರ್ಥ್ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement
No nation can claim itself to be safe if the security of its own PM gets compromised. I condemn, in the strongest words possible, the cowardly attack on PM Modi by anarchists.#BharatStandsWithModi #PMModi
— Saina Nehwal (@NSaina) January 5, 2022
Advertisement
ಜನವರಿ 5ರಂದು ಪಂಜಾಬ್‍ನ ಫಿರೋಜ್‍ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಸಿದ್ದಾರ್ಥ್ ಅವರು ಅವಹೇಳಕಾರಿ ಕಾಮೆಂಟ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ
Advertisement
ಈ ಹಿನ್ನೆಲೆ ಸಿದ್ಧಾರ್ಥ್ ಅವರು, ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ.
Dear @NSaina pic.twitter.com/plkqxVKVxY
— Siddharth (@Actor_Siddharth) January 11, 2022
ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್