ರಾಮನಗರ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಬೆಲೆ ಗ್ರಾಮದ ನಿವಾಸಿ ಚಂದ್ರಬಾಬು ಕೊಲೆಯಾದ ದುರ್ದೈವಿ. ಗುರುವಾರ ತಡರಾತ್ರಿ ಕೊಲೆಯಾದ ಚಂದ್ರಬಾಬು ಹಾಗೂ ಆತನ ಸ್ನೇಹಿತ ರಂಜಿತ್ ಇಬ್ಬರು ಸೇರಿ ಮದ್ಯಪಾನ ಮಾಡಿದ್ದಾರೆ. ಮದ್ಯಪಾನದ ವೇಳೆ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ನಡೆದಿದೆ.
Advertisement
Advertisement
ಗಲಾಟೆ ವಿಕೋಪಕ್ಕೆ ತಿರುಗಿ ರಂಜಿತ್ ತನ್ನ ಸ್ನೇಹಿತ ಚಂದ್ರಬಾಬುವಿಗೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ತೀವ್ರವಾಗಿ ರಕ್ತಸ್ರಾವವಾಗಿ ಚಂದ್ರಬಾಬು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮೃತ ದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Advertisement
ಘಟನೆ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ರಂಜಿತ್‍ನನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv