ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮಾಡಲು ಬಂದಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‍ನ ಮುತ್ತಗಟ್ಟಿ ರಸ್ತೆಯಲ್ಲಿ ನಡೆದಿದೆ.
ಯುವಕ ಅಪರಿಚಿತನಾಗಿದ್ದು, ಸುಮಾರು 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಲಾಗಿದೆ. ಭಾನುವಾರ ರಾತ್ರಿ ಸ್ನೇಹಿತರ ಜೊತೆ ಮೃತ ಯುವಕ ಪಾರ್ಟಿ ಮಾಡಲು ಬಂದಿದ್ದಾನೆ. ಈ ವೇಳೆ ಮದ್ಯಪಾನ ಮಾಡಿ ಬಳಿಕ ಮದ್ಯದ ಅಮಲಿನಲ್ಲಿ ಬಾಟಲ್ ನಿಂದ ಹೊಡೆದು ಕಲ್ಲಿನಿಂದ ಜಜ್ಜಿ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕೊಲೆಯಾದ ಜಾಗದಲ್ಲಿ ಕೆಎ- 51-ಎಚ್‍ಎಫ್-9207 ಹೋಂಡಾ ಡಿಯೋ ಬೈಕ್ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ. ಇಂದು ಮುಂಜಾನೆ ರಸ್ತೆಯಲ್ಲಿ ಓಡಾಡುವಾಗ ಸ್ಥಳೀಯರು ನೋಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಮೃತ ಯುವಕನ ವಿಳಾಸ ಇನ್ನೂ ಪತ್ತೆಯಾಗಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv