ಕಾರವಾರ: ನಾನು ಮೊದಲಿನಿಂದಲೂ ಸ್ನೇಹಕ್ಕೆ ಗೌರವ ಕೊಟ್ಟ ವ್ಯಕ್ತಿ. ಜನಾರ್ದನ ರೆಡ್ಡಿ (Janardhan Reddy) ಜೊತೆಗಿನ ಸ್ನೇಹ ರಾಜಕೀಯ ಹೊರತಾದದ್ದು. ಪಕ್ಷ ನನಗೆ ತಾಯಿಗೆ ಸಮಾನ. ಪಕ್ಷ ಹಾಗೂ ಸ್ನೇಹವನ್ನು ಸಮಾನವಾಗಿ ತೆಗೆದುಕೊಂಡು ಹೋಗುತ್ತೇನೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಸಚಿವ ಶ್ರೀರಾಮುಲು (Sriramulu) ಹೇಳಿಕೆ ನೀಡಿದರು.
ಯಲ್ಲಾಪುರದ ನಂದೊಳ್ಳಿಯಲ್ಲಿ ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ನೇಹವೇ ಬೇರೆ ರಾಜಕಾರಣವೇ ಬೇರೆ. ಎರಡನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ. ಬಿಜೆಪಿ (BJP) ಹಿಂದಿನಿಂದಲೂ ಶಿಸ್ತಿನ ಪಾಠ ಮಾಡಿದೆ. ನಾನು ಸ್ನೇಹಕ್ಕೆ ಯಾವಾಗಲೂ ಚಿರಋಣಿ. ಅದನ್ನು ಬಿಟ್ಟುಕೊಡಲು ಆಗುವುದಿಲ್ಲ. ಪಕ್ಷ ನನ್ನ ತಾಯಿಗೆ ಸಮ. ಅದನ್ನೂ ಯಾವತ್ತೂ ಬಿಟ್ಟುಕೊಡಲು ಸಾಧ್ಯವಿಲ್ಲ. ಜನಾರ್ದನ ರೆಡ್ಡಿಯನ್ನು ಪಕ್ಷಕ್ಕೆ ಮರಳಿ ಕರೆತರುವ ವಿಚಾರವನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
Advertisement
Advertisement
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲು ಹೇಳುತ್ತದೆಯೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಈವರೆಗೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಸೂಚನೆ ನೀಡಿಲ್ಲ. ಪಕ್ಷ ಹೇಳಿದ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
Advertisement
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ನನ್ನನ್ನು 4ನೇ ಬಾರಿ ಮಂತ್ರಿ ಮಾಡಲು ಅವಕಾಶ ನೀಡಿದೆ. ನಮ್ಮ ಉದ್ದೇಶ ಇಷ್ಟೇ, ಪಾರ್ಟಿ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಇದನ್ನೂ ಓದಿ: ಡಿಕೆಶಿ ಆ್ಯಕ್ಟಿವ್ ಇದ್ದಾರೆ, ರಾತ್ರಿ-ಹಗಲು ಪಕ್ಷಕ್ಕಾಗಿ ಕೆಲಸ ಮಾಡ್ತಿದ್ದಾರೆ: ಸತೀಶ್ ಜಾರಕಿಹೊಳಿ
Advertisement
ಕಾಂಗ್ರೆಸ್‌ನವರು ಸೋತು ಸುಣ್ಣವಾಗಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಒಂದೊಂದು ದಿಕ್ಕಿಗೆ ಓಡುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಹಗಲುಗನಸು ಕಾಣುತ್ತಿದ್ದಾರೆ. ಎಲ್ಲಾ ಸರ್ವೇಗಳನ್ನು ನೋಡಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕೆಲವೊಂದು ಕಡೆ ಬಿದ್ದರಬಹುದು. ಆದರೆ ಚುನಾವಣೆಗೆ 4-5 ತಿಂಗಳು ಇರುವ ಕಾರಣ ಎಲ್ಲವನ್ನೂ ಸರಿ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್‌ನ ಹಗಲುಗನಸನ್ನು ನನಸಾಗಿಸಲು ಬಿಡುವುದಿಲ್ಲ. 2023 ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಂಜನಾದ್ರಿಗೆ ರಾಜ್ಯಪಾಲರ ಭೇಟಿ