ಪವಿತ್ರಾ ಲೋಕೇಶ್ ಜೊತೆಗಿನ ಸ್ನೇಹ: ಮದುವೆಗೆ ಭಿನ್ನ ವ್ಯಾಖ್ಯಾನ ಕೊಟ್ಟ ನಟ ನರೇಶ್

Public TV
2 Min Read
naresh 1

ನ್ನಡದ ಹೆಸರಾಂತ ಪೋಷಕ ನಟಿ ಪವಿತ್ರಾ ಲೋಕೇಶ್ (Pavitra Lokesh) ಜೊತೆಗಿನ ಸ್ನೇಹಕ್ಕೆ ತಮ್ಮದೇ ಆದಂತಹ ವ್ಯಾಖ್ಯಾನ ನೀಡಿದ್ದಾರೆ ನಟ ನರೇಶ್ (Naresh). ತಮ್ಮ ಲವ್ ಸ್ಟೋರಿ ಆಧರಿಸಿದ ‘ಮತ್ತೆ ಮದುವೆ’ (Matte Maduve)ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನರೇಶ್, ‘ಎರಡು ಹೃದಯಗಳು ಒಂದಾಗುವುದೇ ಮದುವೆ’ ಎಂದು ಹೇಳಿದ್ದಾರೆ. ಮದುವೆ ವ್ಯವಸ್ಥೆ ಹಾಳಾಗಿ ಹೋಗಿದೆ. ಫ್ಯಾಮಿಲಿ ಕೋರ್ಟ್ ಸಂಖ್ಯೆ ಹೆಚ್ಚಾಗಿವೆ ಎಂದರೆ ಮದುವೆ (marriage) ಕುರಿತು ಯೋಚಿಸಬೇಕಿದೆ ಎಂದಿದ್ದಾರೆ ನರೇಶ್.

naresh 2

ಇಂತಹ ಮಾತುಗಳನ್ನು ಆಡುವ ಮೂಲಕ ಪವಿತ್ರಾ ಲೋಕೇಶ್ ಜೊತೆಗಿನ ಬಾಂಧವ್ಯವನ್ನು ಒಪ್ಪಿಕೊಂಡಿದ್ದಾರೆ. ಮದುವೆ ಅಂದರೆ, ತಾಳಿ ಕಟ್ಟಲೇಬೇಕು ಅಂತೇನೂ ಇಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. ಎರಡು ಹೃದಯಗಳು ಬೆರತ ಮೇಲೆ ಅದುವೇ ಮದುವೆ ಎಂದು ಹೇಳುವ ಮೂಲಕ ಪವಿತ್ರಾ ಲೋಕೇಶ್ ಮತ್ತು ತಮ್ಮದು ಯಾವ ರೀತಿಯ ಸಂಬಂಧವೆಂದು ಅವರು ವಿವರಿಸಿದ್ದಾರೆ.  ಇದನ್ನೂ ಓದಿ:ಬಾಕ್ಸ್ ಆಫೀಸ್ ಬಾಚುತ್ತಿರುವ ದಿ ಕೇರಳ ಸ್ಟೋರಿ : 7 ದಿನಕ್ಕೆ ₹80 ಕೋಟಿ ಕಲೆಕ್ಷನ್

pavitra lokesh

ನಿನ್ನೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೈಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.

Ramya naresh

ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.

Pavitra lokesh

ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

Pavitra Lokesh Matte maduve

ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

pavitra lokesh 2

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದೆ.

Share This Article