ಡೆಹ್ರಾಡೂನ್: ಜೋಶಿಮಠದ (Joshimath) ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ. 500ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಜನರು ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.
#WATCH | We've appealed to everyone to work as a team & save #Joshimath. (People of) 68 houses that were in danger have been shifted. A zone of over 600 houses has formed & efforts are underway to shift them. PM is also monitoring it &has assured all possible help: Uttarakhand CM pic.twitter.com/7QorJeBD9d
— ANI UP/Uttarakhand (@ANINewsUP) January 9, 2023
Advertisement
ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಸದಸ್ಯರು ಉತ್ತರಾಖಂಡದ (Uttarakhand) ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಚಮೋಲಿ ಜಿಲ್ಲೆಯಲ್ಲಿರುವ ಜೋಶಿಮಠ ಉಳಿಸುವ ಎಲ್ಲ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (PMO) ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ್ರೆ ರಾಜಕೀಯ ಎದುರಾಳಿಗಳಿಗೆ ಸಂಕಷ್ಟನಾ..?
Advertisement
Advertisement
ಭಾನುವಾರ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ನಡೆದ ಪರಿಶೀಲನಾ ಸಭೆಯ ನಂತರ ಗೃಹ ಸಚಿವಾಲಯದ ಗಡಿ ನಿರ್ವಹಣಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರು ಉತ್ತರಾಖಂಡಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಲು ನಿಧರ್ರಿಸಲಾಯಿತು. ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ, ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ನಡೆಸಿದ ಸಭೆಯಲ್ಲಿದ್ದರು. ಇದನ್ನೂ ಓದಿ: ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ಎಸೆದಿಲ್ಲ: NFR ಸ್ಪಷ್ಟನೆ
Advertisement
ಸದ್ಯ ಸಂತ್ರಸ್ತರಿಗೆ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ವಿಭಿನ್ನ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ತಜ್ಞರನ್ನು ಆಹ್ವಾನಿಸಿದ್ದೇವೆ. ಜ್ಯೋತಿಷಿಗಳಿಂದ ಧರ್ಮ ಶಾಸ್ತ್ರಿಗಳವರೆಗೂ ಜ್ಯೋತಿರ್ಮಠವನ್ನು ಸಂರಕ್ಷಿಸುವ ಆಚರಣೆಗಳ ಬಗ್ಗೆ ಅವರು ನಮಗೆ ತಿಳಿಸಿದ್ದಾರೆ ಎಂದು ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.
ಇದೇ ತಿಂಗಳ ಜನವರಿ 22-31ರ ವರೆಗೆ ನರಸಿಂಗ ದೇವಸ್ಥಾನದಲ್ಲಿ ವಿಶೇಷ ಯಾಗ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಅದನ್ನು ನಾವು ಮಾಡೇ ಮಾಡುತ್ತೇವೆ. ಹೊರತಾಗಿ ಪರಿಸ್ಥಿತಿಗೆ ಕಾರಣವೇನೆಂಬುದನ್ನು ತನಿಖೆ ಮಾಡಲು ತಜ್ಞರನ್ನು ಸಹ ಕರೆಸಬೇಕು. ಅಲ್ಲಿವರೆಗೆ ನಾವು ನೊಂದ ಜನರೊಂದಿಗೆ ನಿಲ್ಲುತ್ತೇವೆ ಎಂದು ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ತಿಳಿಸಿದ್ದಾರೆ.
ನಾವು ಸಹ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದೇವೆ. ನಮ್ಮೊಂದಿಗೆ ನಮ್ಮ ಕಾನೂನು ತಂಡವಿದೆ. ಈ ವಿಷಯವನ್ನು ಸಿಜೆಐ ಮುಂದೆ ಮಂಡಿಸಿ ತುರ್ತು ವಿಚಾರಣೆಗೆ ಮನವಿ ಮಾಡಲಾಗುವುದು. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯಿಸಲಾಗುವುದು ಎಂದು ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ, ಐಐಟಿ ರೂರ್ಕಿ, ವಾಡಿಯಾ ಇನ್‌ಸ್ಟಿಟ್ಯೂಟ್ ಆಫ್ ಹಿಮಾಲಯನ್ ಜಿಯಾಲಜಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈಡ್ರಾಲಜಿ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ತಜ್ಞರ ತಂಡಗಳು ಅಧ್ಯಯನ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಎನ್‌ಡಿಆರ್‌ಎಫ್‌ನ ಒಂದು ತಂಡ ಮತ್ತು ಎಸ್‌ಡಿಆರ್‌ಎಫ್‌ನ 4 ತಂಡಗಳು ಈಗಾಗಲೇ ಜೋಶಿಮಠಕ್ಕೆ ತಲುಪಿದ್ದು, ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಲ್ಲಿ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k