ಕೊಲೆ ಆರೋಪಿ ಆಗಿರುವ ನಟ ದರ್ಶನ್ (Darshan) ಮೂರನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿ ಮೂರು ದಿನಗಳು ಕಳೆದಿವೆ. ರಾಜಾತಿಥ್ಯ ಕೊಟ್ರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ (Supreme Court) ಎಚ್ಚರಿಕೆ ನೀಡಿರುವ ಹಿನ್ನೆಲೆ ದರ್ಶನ್‌ಗೆ ಜೈಲ್‌ನ ಮೆನುವಿನ ಪ್ರಕಾರವೇ ಊಟ ನೀಡಲಾಗುತ್ತಿದೆ.
 
View this post on Instagram 
ಸದ್ಯಕ್ಕೆ ಸಹ ಕೈದಿಗಳ ಜೊತೆಗೂ ಬಿಡದ ಕಾರಣ ನಾಲ್ಕು ಗೋಡೆಗಳ ಮಧ್ಯದಲ್ಲೇ ದಿನದ ಬಹುತೇಕ ಸಮಯ ಕಳೆಬೇಕಿದೆ ದರ್ಶನ್. ಇತ್ತ ಮೇಲಿಂದ ಮೇಲೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುವ ಪತ್ನಿ ವಿಜಯಲಕ್ಷ್ಮಿ ಈಗ ದರ್ಶನ್ ಪರ ಸಿನಿ ಪ್ರಚಾರಕ್ಕಿಳಿದಿದ್ದಾರೆ. ಇದನ್ನೂ ಓದಿ: ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
ಯೆಸ್. ದರ್ಶನ್ ಪರ ಅಖಾಡಕ್ಕಿಳಿದಿರುವ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ತಮ್ಮ ಇನ್‌ಸ್ಟಾ ಖಾತೆಯಲ್ಲಿ ಡೆವಿಲ್ ಸಿನಿಮಾ ಪ್ರಚಾರ ಕುರಿತಾದ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ದಚ್ಚು ಅಭಿಮಾನಿಗಳಿಗೆ ಭರವಸೆಯಾಗಿ ನಿಂತಿದ್ದಾರೆ. ಇದನ್ನೂ ಓದಿ: ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್

ಪೋಸ್ಟ್‌ನಲ್ಲಿ ಏನಿದೆ? 
ನಿಮ್ಮ ಚಾಲೆಂಜಿಂಗ್ ಸ್ಟಾರ್ ನಿಮ್ಮೆಲ್ಲರನ್ನೂ ತಮ್ಮ ಹೃದಯದಲ್ಲಿ ಹೊತ್ತುಕೊಂಡಿರ್ತಾರೆ. ನಿಮ್ಮೆಲ್ಲರಿಗಾಗಿ ಹಿಂತಿರುಗುವವರೆಗೆ, ಅವರ ಪರವಾಗಿ ನಾನು ಸೋಷಿಉಲ್ ಮೀಡಿಯಾವನ್ನು ನಿರ್ವಹಿಸುತ್ತೇನೆ. ಜೊತೆಗೆ ಚಲನಚಿತ್ರ ಪ್ರಚಾರ ಹಾಗೂ ಅಪ್‌ಡೇಟ್ಸ್‌ಗಳನ್ನು ಹಂಚಿಕೊಳ್ಳುತ್ತೇನೆ. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?

ನೀವು ತೋರಿಸುತ್ತಿರುವ ಪ್ರೀತಿ, ಪ್ರಾರ್ಥನೆ ಮತ್ತು ತಾಳ್ಮೆ ಅವರಿಗೆ ಮತ್ತು ನಮ್ಮ ಕುಟುಂಬಕ್ಕೆ ಅಪಾರ ಶಕ್ತಿಯನ್ನು ನೀಡುತ್ತದೆ. ಆ ಏಕತೆ ಮತ್ತು ಸಕಾರಾತ್ಮಕತೆಯನ್ನು ಉಳಿಸಿಕೊಳ್ಳೋಣ. ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ. ನೀವು ಯಾವಾಗಲೂ ತಿಳಿದಿರುವ ಅದೇ ಪ್ರೀತಿ ಮತ್ತು ಶಕ್ತಿಯೊಂದಿಗೆ ಹಿಂತಿರುಗುತ್ತಾರೆ ಎಂದು ಬರೆದುಕೊಂಡಿದ್ದಾರೆ.
 


 
		 
		 
		 
		 
		
 
		 
		 
		 
		