ಬೆಂಗಳೂರು: ಇಂಧನ ಮತ್ತು ಗ್ಯಾಸ್ ಬೆಲೆ ಯಾಕೆ ಜಾಸ್ತಿ ಆಗಿದೆ ಅಂತಾ ಎಲ್ಲರಿಗೂ ಗೊತ್ತಿದೆ. ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತದೆ. ಆದರೆ ಇಲ್ಲಿ ರಾಜಕಾರಣ ಮಾಡಲಾಗುತ್ತಿದೆ, ನಿಜವಾದ ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ, ಬೀದಿಗೆ ಬಂದಿರುವವರು ರಾಜಕಾರಣಿಗಳು ಎಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ಸಚಿವ ನಾರಾಯಣಗೌಡ ಉಡಾಫೆಯ ಉತ್ತರ ನೀಡಿದ್ದಾರೆ.
Advertisement
ಬಿಜೆಪಿ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ವಿಚಾರದ ಪ್ರತಿಭಟನೆಯಲ್ಲಿ ಒಂದು ಡ್ರಾಮಾ ನಡೆಯುತ್ತಿದೆ. ನಿಜವಾದ ಸಮಸ್ಯೆ ಯಾರಿಗೂ ಆಗಿಲ್ಲ, ಇದು ರಾಜಕಾರಣದ ಪಿತೂರಿ. ಕಾಂಗ್ರೆಸ್ ಸರ್ಕಾರ ಇರುವಾಗ ಬೆಲೆ ಏರಿಕೆ ಆಗಿಲ್ವಾ? ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ ಎಂದು ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ
Advertisement
Advertisement
ಅಲ್ಲದೆ ಮನೆ ಮನೆಗೆ ಗ್ಯಾಸ್ ಕೊಟ್ಟಿರುವವರು ಯಾರು? ಹೆಣ್ಣು ಮಕ್ಕಳಿಗೆ ತೊಂದರೆ ಅಗಬಾರದು ಎಂದು ಉಚಿತವಾಗಿ ಕೊಟ್ಟಿರೋದು ಅದು. ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತದೆ. ಸಮಸ್ಯೆ ಬಗೆಹರಿಸಲು ಪ್ರಧಾನಿ ಸನ್ನದ್ಧವಾಗುತ್ತಿದ್ದಾರೆ. ಕಾಂಗ್ರೆಸ್ ಅವರಿಂದ ಹೇಳಿಸಿಕೊಳ್ಳಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ: ಪ್ರಹ್ಲಾದ್ ಜೋಶಿ
Advertisement
ಪ್ರತಿಭಟನೆ ಮಾಡಿಸುತ್ತಿರೋದು ರಾಜಕಾರಣ. ಬೆಲೆ ಏರಿಕೆ ತಾತ್ಕಾಲಿಕ, ಅದು ಕಡಿಮೆ ಆಗುತ್ತದೆ. ಶಾಸಕರದ್ದು, ಸಚಿವರದ್ದು ವೇತನ ಹೆಚ್ಚಳ ಆಗಿಲ್ಲ, ನಾವೂ ಕೇಳಿಲ್ಲ. ಶಾಸಕರಿಗೂ ಡೀಸೆಲ್, ಪೆಟ್ರೋಲ್ ಖರ್ಚು ಇರುತ್ತದೆ ಎಂದು ಹೇಳಿದ್ದಾರೆ.