ಬೆಂಗಳೂರು: ತೈಲ ಬೆಲೆ ಏರಿಕೆಗೂ (Fuel Price Hike) ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು (Guarantee Scheme) ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.
ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆಗೆ ಯಾರು ಏನೇ ಹೇಳಿದರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದು ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ತಂದೆಗೆ 25,000 ರೂ. ದಂಡ!
Advertisement
Advertisement
ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನು ಕಂಟ್ರೋಲ್‌ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬ್ಯುಸಿನೆಸ್ ಜಾಸ್ತಿ ಹೋಗುತ್ತಿತ್ತು. ಆ ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬ್ಯುಸಿನೆಸ್ ಕಂಟ್ರೋಲ್ ಆಗಲಿ ಎಂದು ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ: ಆರ್ ಅಶೋಕ್
Advertisement