ಹೈದರಾಬಾದ್: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿಯೂ ತೆಲಗು ದೇಶಂ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ನಂದಿಗಾಮ ಗ್ರಾಮದಲ್ಲಿ ಟಿಡಿಪಿ ಕಾರ್ಯಕರ್ತರು ತಮ್ಮ ಸ್ಕೂಟರ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದ್ರು. ಕಾರ್ಯಕರ್ತರು ಸ್ಕೂಟರ್‍ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Advertisement
ಈಗಾಗಲೇ ಪೆಟ್ರೋಲ್, ಡೀಸೆಲ್ ರೇಟ್ ಜಾಸ್ತಿ ಆಗಿದೆ. ಈ ಮಧ್ಯೆ ಮತ್ತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚುತ್ತಲೇ ಇದ್ದು, ಕೆಲದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್‍ಗೆ 3ರಿಂದ 4 ರೂಪಾಯಿಯಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
Advertisement
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ ಮೇ 14ರವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆ ಆಗಿರಲಿಲ್ಲ. ಈಗ ಪ್ರತಿ ದಿನ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 78.12 ರೂ. ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 69.25 ರೂ. ಇದೆ.
Advertisement
Advertisement
2 ವರ್ಷದ ಹಿಂದೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 40 ಡಾಲರ್(ಅಂದಾಜು 2,700 ರೂ.) ಇತ್ತು. ಆದರೆ ಈಗ ದುಪ್ಪಟ್ಟು ಆಗಿದ್ದು 79 ಡಾಲರ್(ಅಂದಾಜು 5,300 ರೂ.) ಆಗಿದೆ.
ಬೆಲೆ ಏರಿಕೆ ಆಗುತ್ತಿರೋದು ಯಾಕೆ?
ಈ ಹಿಂದೆ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ(ಒಪೆಕ್) ನಡುವೆ ಶೀತಲ ಸಮರವಿತ್ತು. ಹೀಗಾಗಿ ಈ ರಾಷ್ಟ್ರಗಳು ತೈಲ ಉತ್ಪಾದನೆಗೆ ಯಾವುದೇ ಮಿತಿ ಹಾಕಿರಲಿಲ್ಲ. ಆದರೆ ಈಗ ಈ ರಾಷ್ಟ್ರಗಳ ಮಿತಿ ಹಾಕಿದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ದಿನವೂ ಏರಿಕೆಯಾಗುತ್ತಿದೆ. ಎಸ್‍ಆಂಡ್‍ಪಿ ಗ್ಲೋಬಲ್ ಪ್ಯಾಂಟ್ ಅಧ್ಯಯನದ ಪ್ರಕಾರ ತೈಲ ಉತ್ಪಾದಿಸುವ 14 ದೇಶಗಳಲ್ಲಿ ಉತ್ಪಾದನೆ ಕಡಿಮೆಯಾಗಿದೆ. ಈ ಹಿಂದೆ ಪ್ರತಿದಿನ 32 ದಶಲಕ್ಷ ಬ್ಯಾರೆಲ್ ಉತ್ಪಾದಿಸುತ್ತಿದ್ದರೆ ಏಪ್ರಿಲ್ ನಲ್ಲಿ 1.40 ದಶಲಕ್ಷ ಕಡಿಮೆಯಾಗಿದೆ. ವಿಶ್ವದೆಲ್ಲೆಡೆ ಭಾರೀ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಒಪೆಕ್ ರಾಷ್ಟ್ರಗಳು ಜೂನ್ 22 ರಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳೆ ತೈಲ ಉತ್ಪಾನೆಯ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
#AndhraPradesh: A Telegu Desam Party (TDP) worker sets his own two-wheeler on fire in Krishna district's Nandigama Village, in protest against fuel price-hike. pic.twitter.com/1xk5bO1jO8
— ANI (@ANI) May 22, 2018