– ನಾಳೆಯಿಂದಲೇ ಜಾರಿಗೆ ಸೂಚನೆ
ಬೆಂಗಳೂರು: ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ (Petrol, Diesel) ದರ ಪಟ್ಟಿ ಕನ್ನಡದಲ್ಲೂ ಇರಲಿದೆ. ನಾಳೆಯಿಂದಲೇ ಕನ್ನಡದಲ್ಲಿ ಪ್ರದರ್ಶಿಸಲು ಸೂಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಹೇಳಿದ್ದಾರೆ.
ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಕ್‌ಗಳಲ್ಲಿ ಪೆಟ್ರೋಲ್ ಬೆಲೆ (Fuel Prices) ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಇದ್ದು, ಕನ್ನಡದಲ್ಲಿ ನೀಡಬೇಕು ಎಂಬ ಮನವಿ ಇದೆ. ಇಂಧನ ಬೆಲೆಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂಬ ಬೇಡಿಕೆಯಿತ್ತು. ನಾಳೆಯಿಂದ ಕನ್ನಡದಲ್ಲಿ ಲಭ್ಯವಿರುತ್ತದೆ ಎಂದು ನಾನು ತಕ್ಷಣ ಘೋಷಿಸಿದೆ. ತೈಲ ಕಂಪನಿಗಳಿಗೆ ಕನ್ನಡದಲ್ಲಿ ಪ್ರದರ್ಶಿಸುವ ಬೆಲೆಗಳನ್ನು ಹೊಂದಿರಬೇಕು ಎಂದು ಸೂಚಿಸಲು ನನ್ನ ಸಹೋದ್ಯೋಗಿಗಳಿಗೆ ಹೇಳಿದ್ದೇನೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ
ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಇದ್ದೇನೆ. ಹಾಸನ, ಬೇಲೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೆ. ಕೇಂದ್ರದ ಯೋಜನೆಗಳಿಗೆ ಇಲ್ಲಿ ಉತ್ತಮ ಸ್ಪಂದನೆ ಇದೆ. ಕೇಂದ್ರದ ಬಹಳಷ್ಟು ಯೋಜನೆಗಳು ಮಹಿಳಾ ಕೇಂದ್ರಿತವಾಗಿವೆ. ಅನೇಕ ಮಹಿಳೆಯರು ಫಲಾನುಭವಿಗಳಾಗಿ ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜನರೇ ನಮ್ಮನ್ನು ಗೆಲ್ಲಿಸ್ತಾರೆ. ಚುನಾವಣೆಗಳು ಬರ್ತವೆ, ಹೋಗ್ತವೆ. ಆದರೆ ಕೇಂದ್ರದ ಯೋಜನೆಗಳು ಜನರ ಮೇಲೆ ಬಹಳಷ್ಟು ಪ್ರಭಾವ ಬೀರಿವೆ. ಮೋದಿಯವರು ಮತ್ತು ಕೇಂದ್ರದ ಯೋಜನೆಗಳ ಮೇಲೆ ಜನರ ನಂಬಿಕೆ ಹೆಚ್ಚಾಗಿದೆ. ವಿಪಕ್ಷಗಳು ಏನೇ ರಾಜಕೀಯ ಆರೋಪ ಮಾಡಬಹುದು. ನಾವು ಹೆಚ್ಚಿನ ಸಂಸತ್ ಸ್ಥಾನಗಳನ್ನು ಗೆಲ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2023ರ ಅರ್ಜುನ ಪ್ರಶಸ್ತಿ ಪಡೆದ ಕೈಗಳಿಲ್ಲದ ಬಿಲ್ಲುಗಾರ್ತಿ ಶೀತಲ್ ದೇವಿ – ಸಾಧನೆಗಳೇನು?
ರಾಜ್ಯದ ದೇವಸ್ಥಾನಗಳಲ್ಲಿ ರಾಮಮಂದಿರ ಉದ್ಘಾಟನೆ ದಿನ ವಿಶೇಷ ಪೂಜೆಗೆ ಆದೇಶ ವಿಚಾರವಾಗಿ ಮಾತನಾಡಿ, ಇದು ಒಳ್ಳೆಯ ನಡೆ. ನಾನು ಇದನ್ನು ಸ್ವಾಗತ ಮಾಡುತ್ತೇನೆ. ಪೂಜೆಯನ್ನು ದೇವಸ್ಥಾನಗಳಲ್ಲೇ ಮಾಡಬೇಕು. ರೈಲ್ವೆ ಸ್ಟೇಷನ್‌ನಲ್ಲಿ ಮಾಡೋಕೆ ಆಗತ್ತದಾ? ಒಳ್ಳೆಯ ಬೆಳವಣಿಗೆ, ಸನಾತನ ಸಂಸ್ಕೃತಿಯನ್ನು ಅವರು ಒಪ್ಪಿದ್ದಾರೆ ಎಂದರ್ಥ ಎಂದು ರಾಜ್ಯ ಸರ್ಕಾರದ ಕ್ರಮವನ್ನ ಸ್ವಾಗತಿಸಿದ್ದಾರೆ.
ಭಾರತದಲ್ಲಿ ಮಾತ್ರ ಕಳೆದ ಎರಡು ವರ್ಷದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ ಆಗಿರೋದು ಎಂದ ಸಚಿವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರ ಕೊಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ – ಜ.22ರಂದು ಉತ್ತರ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ